ವಿಶ್ವದಾದ್ಯಂತ ಕೋವಿಡ್ ಲಸಿಕೆ ಹಿಂತೆಗೆದುಕೊಂಡ ಆಸ್ಟ್ರಾಜೆನೆಕಾ : ವರದಿ

ನವದೆಹಲಿ: ಬ್ರಿಟಿಷ್ ಔಷಧೀಯ ಕಂಪನಿ ಆಸ್ಟ್ರಾಜೆನೆಕಾ ತನ್ನ ಕೋವಿಡ್‌-19 ಲಸಿಕೆಯು ಅಪರೂಪದ ಅಡ್ಡಪರಿಣಾಮಗಳಿಗೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿದೆ ಎಂದು ವರದಿಯಾದ ಕೆಲ ದಿನಗಳ ನಂತರ ಈಗ ತನ್ನ ಕೋವಿಡ್‌-19 ಲಸಿಕೆಯನ್ನು ಜಾಗತಿಕವಾಗಿ ಹಿಂತೆಗೆದುಕೊಳ್ಳಲು ಪ್ರಾರಂಭಿಸಿದೆ. ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯವು ಅಭಿವೃದ್ಧಿಪಡಿಸಿದ ಲಸಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾವು ಭಾರತದಲ್ಲಿ ಕೋವಿಶೀಲ್ಡ್ ಹೆಸರಿನಲ್ಲಿ ತಯಾರಿಸಿದೆ. ಲಸಿಕೆ … Continued

ಲೋಕಸಭೆ ಚುನಾವಣೆ: ಮೂರನೇ ಹಂತದಲ್ಲಿ ಅಂದಾಜು 64.4%ರಷ್ಟು ಮತದಾನ

ನವದೆಹಲಿ : 11 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಲ್ಲಿ ಮಂಗಳವಾರ ನಡೆದ ಮೂರನೇ ಹಂತದ ಲೋಕಸಭಾ ಚುನಾವಣೆಯ ಮತದಾನದ ಪ್ರಮಾಣ ರಾತ್ರಿ 11: 40ರ ಹೊತ್ತಿಗೆ ಸರಿಸುಮಾರು 64.40% ಆಗಿದೆ. ಅಸ್ಸಾಂನಲ್ಲಿ (4 ಸ್ಥಾನಗಳು) 81.61 ಅತಿ ಹೆಚ್ಚು ಮತದಾನವಾಗಿದೆ. ಮತ್ತು ಉತ್ತರ ಪ್ರದೇಶದಲ್ಲಿ (10 ಸ್ಥಾನಗಳು) ಕಡಿಮೆ ಮತದಾನ 57.34 ರಷ್ಟು ಕಡಿಮೆಯಾಗಿದೆ ಎಂದು … Continued

ಹೈದರಾಬಾದ್ ಮಳೆ: ಗೋಡೆ ಕುಸಿದು 7 ಕಾರ್ಮಿಕರು ಸಾವು

ಹೈದರಾಬಾದ್: ಮೇ 7 ರ ಮಂಗಳವಾರ ರಾತ್ರಿ ಹೈದರಾಬಾದ್‌ ಮಹಾನಗರದ ಬಾಚುಪಲ್ಲಿಯ ರೇಣುಕಾ ಎಲ್ಲಮ್ಮ ಕಾಲೋನಿಯಲ್ಲಿ ತಡೆಗೋಡೆ ಕುಸಿದು ಏಳು ಕಾರ್ಮಿಕರು ಸಾವಿಗೀಡಾದ ದಾರುಣ ಘಟನೆ ನಡೆದಿದೆ. ತೀವ್ರ ಬಿಸಿಲಿನ ನಂತರ ಹೈದರಾಬಾದ್‌ನಲ್ಲಿ ಭಾರೀ ಮಳೆಯಾಗಿದೆ. ಮೃತ ಕಾರ್ಮಿಕರು ಒಡಿಶಾ ಮತ್ತು ಛತ್ತೀಸ್‌ಗಢ ರಾಜ್ಯದವರಾಗಿದ್ದು, ಉದ್ಯೋಗಕ್ಕಾಗಿ ಹೈದರಾಬಾದ್‌ಗೆ ವಲಸೆ ಬಂದಿದ್ದಾರೆ. ಬಾಚುಪಲ್ಲಿಯ ರೇಣುಕಾ ಕಾಲೋನಿಯಲ್ಲಿ ಅನುಮತಿಯೊಂದಿಗೆ … Continued

ಪತಿ ಸಾವಿನ ಸುದ್ದಿ ತಿಳಿದ ನಂತರವೂ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪತ್ನಿ

ಶಿವಮೊಗ್ಗ: ಪತಿ ನಿಧನರಾದ ಸುದ್ದಿ ತಿಳಿದ ನಂತರವೂ ಮಂಗಳವಾರ ಮತಕೇಂದ್ರಕ್ಕೆ ತೆರಳಿ ಪತ್ನಿ ಮತ ಚಲಾಯಿಸಿದ್ದಾರೆ ಎಂದು ವರದಿಯಾಗಿದೆ. ಆ ಮೂಲಕ ಪ್ರಜಾಪ್ರಭುತ್ವದ ಬಲಪಡಿಸುವ ಆಶಯದಲ್ಲಿ ಅವರು ಪಾಲ್ಗೊಂಡಿದ್ದಾರೆ. ತಾಲೂಕಿನ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ ಆಡುಗೋಡು ಗ್ರಾಮದ ಕಲಾವತಿ ಎಂಬ ಮಹಿಳೆ ತನ್ನ ಗಂಡನ ಕಳೆದುಕೊಂಡ ದುಃಖದ ನಡುವೆಯೂ ಮತಚಲಾಯಿಸಿದ್ದಾರೆ. ನಾಲ್ಕೈದು ದಿನಗಳ ಅನಾರೋಗ್ಯದ ಹಿನ್ನೆಲೆಯಲ್ಲಿ … Continued

ರಾಜ್ಯದ ಲೋಕಸಭೆ ಚುನಾವಣೆ 2ನೇ ಹಂತದಲ್ಲಿ ಶೇ.70.03 ಮತದಾನ; ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ ? ಇಲ್ಲಿದೆ ವಿವರ..

ಬೆಂಗಳೂರು: ಎರಡನೇ ಹಂತದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮಂಗಳವಾರ ನಡೆದ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಈ ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 70.03 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಜನರು ಬಿಸಿಲಿನ ನಡುವೆಯೂ … Continued