ಲೋಕಸಭೆ ಚುನಾವಣೆ : ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ ನಿವೃತ್ತ ನ್ಯಾಯಮೂರ್ತಿಗಳು

ನವದೆಹಲಿ: ಲೋಕಸಭೆ ಚುನಾವಣೆ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕ್ರಮವಾಗಿ ಸುಪ್ರೀಂ ಕೋರ್ಟ್‌ ಮತ್ತು ದೆಹಲಿ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳಾದ ಮದನ್ ಲೋಕೂರ ಮತ್ತು ಎ.ಪಿ. ಶಾ ಅವರು ಸಾರ್ವಜನಿಕ ಚರ್ಚೆಗೆ ಆಹ್ವಾನಿಸಿದ್ದಾರೆ. ಈ ಪ್ರಸ್ತಾವನೆ ಪಕ್ಷಾತೀತವಾಗಿದ್ದು ರಾಷ್ಟ್ರೀಯ ಹಿತಾಸಕ್ತಿಯಿಂದ ಕೂಡಿದೆ ಎಂದು ಈ ಇಬ್ಬರೂ ನಿವೃತ್ತ … Continued

ಸಮ ಸಮಾಜ ನಿರ್ಮಾಣ, ಅಂತರಂಗ-ಬಹಿರಂಗ ಶುದ್ಧಿಯಿಂದ ಜಗಜ್ಯೋತಿಯಾದ ಕಾಯಕಯೋಗಿ ವಿಶ್ವಗುರು ಬಸವಣ್ಣ…

ವಿಶ್ವ ಗುರು ಮತ್ತು ಕರ್ನಾಟಕದ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ೮೯೧ನೇ ಜಯಂತಿಯನ್ನು ೧೦-೦೫-೨೦೨೪ ರಂದು ಆಚರಿಸಲಾಗುತ್ತಿದ್ದು, ತನ್ನಿಮಿತ್ತ ಲೇಖನ) ನಡೆಯನ್ನೇ ನುಡಿಯಾಗಿಸಿದ ಪುಣ್ಯ ಪುರುಷರಲ್ಲಿ ಬಸವಣ್ಣನವರು ಅಗ್ರಗಣ್ಯರು. ತಮ್ಮ ನಡೆ-ನುಡಿಯಗಳನ್ನು ಸ್ಪಟಿಕದ ಸಲಾಖೆಯಂತೆ ನೇರ ಹಾಗೂ ಪಾರದರ್ಶಕವಾಗಿಸಿಕೊಂಡು, ತಮ್ಮ ನಡೆಯಿಂದ ಸಮಾಜಕ್ಕೆ ಚೇತನ ತುಂಬಿದವರು ಅಣ್ಣ ಬಸವಣ್ಣನವರು ; ತಮ್ಮ ನುಡಿಯಿಂದ ಲಿಂಗವನ್ನು ಮೆಚ್ಚಿಸಿ, … Continued

ಎಸ್ ಎಸ್ ಎಲ್‌ ಸಿ ಪರೀಕ್ಷೆ : ನೂರಕ್ಕೆ ನೂರು ಫಲಿತಾಂಶ ಪಡೆದ ಧಾರವಾಡ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

ಧಾರವಾಡ : ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ೨೦೨೩-೨೪ ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶವು ನೂರಕ್ಕೆ ೧೦೦ ರಷ್ಟಾಗಿದೆ. ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಪರೀಕ್ಷೆಗೆ ಒಟ್ಟು ೧೦೯ ಹಾಜರಾಗಿದ್ದು, ಅವರಲ್ಲಿ ೩೯ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ೬೭ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ ಮೂವರು ವಿದ್ಯಾರ್ಥಿಗಳು … Continued

‘ಮೋಸ್ಟ್ ವಾಂಟೆಡ್’ ಭಯೋತ್ಪಾದಕ ಸೇರಿದಂತೆ ಮೂವರು ಉಗ್ರರನ್ನು ಎನ್‌ಕೌಂಟರ್‌ ವೇಳೆ ಹೊಡೆದುರುಳಿಸಿದ ಭದ್ರತಾ ಪಡೆಗಳು

ನವದೆಹಲಿ: ಮಹತ್ವದ ಪ್ರಗತಿಯೊಂದರಲ್ಲಿ, ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮತ್ತು ಎಲ್‌ಇಟಿ ಕಮಾಂಡರ್ ಸೇರಿ ಮೂವರು ಹತರಾಗಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನ ರೆಡ್ವಾನಿ ಪಯೀನ್ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರನ್ನು … Continued

ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು : 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ (ಮೇ 9) ಪ್ರಕಟವಾಗಿದೆ. ಇದರ ಬೆನ್ನಲ್ಲೇ ಈಗ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ ಬಿಡುಗಡೆಯಾಗಿದೆ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಇನ್ನೂ ಉತ್ತಮ ಅಂಕಗಳನ್ನು ಗಳಿಸಲು ಪರೀಕ್ಷಾ ಮಂಡಳಿ ಅವಕಾಶ ಕಲ್ಪಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ (SSLC 2 … Continued

ಶಿವಕಾಶಿಯ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 8 ಮಂದಿ ಸಾವು

ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐವರು ಮಹಿಳಾ ಕಾರ್ಮಿಕರು ಸೇರಿದಂತೆ ಎಂಟು ಮಂದಿ ಸಾವಿಗೀಡಾಗಿದ್ದಾರೆ ಹಾಗೂ ಕೆಲವು ಮಂದಿಗೆ ಸುಟ್ಟಗಾಯಗಳಾಗಿವೆ ಎಂದು ವರದಿಯಾಗಿದೆ. ತಮಿಳುನಾಡಿನ ವಿರುದುನಗರ ಜಿಲ್ಲೆಯ ಶ್ರೀ ಸುದರ್ಶನ್ ಪಟಾಕಿ ಕಾರ್ಖಾನೆಯಲ್ಲಿ ರಾಸಾಯನಿಕಗಳನ್ನು ನಿರ್ವಹಿಸುವಾಗ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗಾಗಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ … Continued

ಎಸ್.ಎಸ್.ಎಲ್.ಸಿ ಫಲಿತಾಂಶ : ಕುಮಟಾ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಪ್ರೌಢಶಾಲೆ ನೂರಕ್ಕೆ ನೂರು ಫಲಿತಾಂಶ, ರಾಜ್ಯಮಟ್ಟದಲ್ಲಿ 7 ರ‍್ಯಾಂಕ್‌

 ಕುಮಟಾ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಶಾಲೆಗೆ ನೂರಕ್ಕೆ ನೂರು ಫಲಿತಾಂಶ ಬಂದಿದ್ದು, ರಾಜ್ಯಕ್ಕೆ ಏಳು ರ‍್ಯಾಂಕ್‌ ಗಳಿಸಿದ್ದಾರೆ. ಪರೀಕ್ಷೆ ಬರೆದ ಒಟ್ಟೂ 154 ವಿದ್ಯಾರ್ಥಿಗಳಲ್ಲಿ, 105 ಮಂದಿ ಡಿಸ್ಟಿಂಕ್ಷನ್‌, … Continued

ಲೈಂಗಿಕ ದೌರ್ಜನ್ಯ ಆರೋಪ: ಜನಸಾಮಾನ್ಯರಿಗೆ ರಾಜಭವನದ ಸಿಸಿಟಿವಿ ದೃಶ್ಯಾವಳಿ ತೋರಿಸಿದ ಪಶ್ಚಿಮ ಬಂಗಾಳದ ರಾಜ್ಯಪಾಲ

ಕೋಲ್ಕತ್ತಾ: ರಾಜಭವನದ ಮಹಿಳಾ ಉದ್ಯೋಗಿಯೊಬ್ಬರು ತಮ್ಮ ವಿರುದ್ಧ ಕಿರುಕುಳದ ಆರೋಪ ಹೊರಿಸಿದ ಹಿನ್ನೆಲೆಯಲ್ಲಿ, ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಗುರುವಾರ ಮೇ 2ರ ರಾಜಭವನದ ಸಿಸಿಟಿವಿ ದೃಶ್ಯಾವಳಿಗಳನ್ನು ಜನಸಾಮಾನ್ಯರಿಗೆ ತೋರಿಸಿದ್ದಾರೆ. ಮೇ 2ರ ಸಂಜೆ 5:30ರ ಸಮಯದ ಮುಖ್ಯ (ಉತ್ತರ) ಗೇಟ್‌ನಲ್ಲಿರುವ ಎರಡು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ರಾಜಭವನದ ನೆಲ ಮಹಡಿಯಲ್ಲಿರುವ … Continued

1950-2015ರ ಅವಧಿಯಲ್ಲಿ ಭಾರತದ ಜನಸಂಖ್ಯೆಯಲ್ಲಿ ಹಿಂದೂಗಳ ಪಾಲು 7.8% ಕುಸಿತ ; ಅಲ್ಪಸಂಖ್ಯಾತರ ಶೇಕಡಾವಾರು ಹೆಚ್ಚಳ : ಪಿಎಂ-ಇಎಸಿ ಅಧ್ಯಯನ

ನವದೆಹಲಿ: ಪ್ರಧಾನ ಮಂತ್ರಿಯ ಆರ್ಥಿಕ ಸಲಹಾ ಮಂಡಳಿ (Prime Minister’s Economic Advisory Council) ನಡೆಸಿದ ಅಧ್ಯಯನವು ಭಾರತದಲ್ಲಿ ಬಹುಸಂಖ್ಯಾತ ಧರ್ಮದ (ಹಿಂದೂಗಳು) ಜನಸಂಖ್ಯೆಯ ಪಾಲು 1950 ಮತ್ತು 2015 ರ ನಡುವೆ ಶೇಕಡಾ 7.8 ರಷ್ಟು ಕುಸಿದಿದೆ, ಇದೇ ಅವಧಿಯಲ್ಲಿ ಮುಸ್ಲಿಮರ ಜನಸಂಖ್ಯೆಯಲ್ಲಿ 43.15% ರಷ್ಟು ಹೆಚ್ಚಳವಾಗಿದೆ ಎಂದು ಅದು ಹೇಳಿದೆ. ಈ ಅವಧಿಯಲ್ಲಿ … Continued

ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ: 625ಕ್ಕೆ 625 ಅಂಕ ಪಡೆದ ಅಂಕಿತಾ ರಾಜ್ಯಕ್ಕೆ ಟಾಪರ್, ಉಡುಪಿ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದ್ದು, ಶೇ 73.40 ಮಂದಿ ತೇರ್ಗಡೆಯಾಗಿದ್ದಾರೆ. ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 2,87,416 (65.90%) ಬಾಲಕರು ಪಾಸ್ ಆಗಿದ್ದು 3,43,788 (81.11%) ಬಾಲಕಿಯರು ಪಾಸ್​ ಆಗಿದ್ದಾರೆ. ಫಲಿತಾಂಶದಲ್ಲಿ ಕಳೆದ ಬಾರಿಗಿಂತ ಶೇ 10ರಷ್ಟು ಕಡಿಮೆ ಆಗಿದೆ. … Continued