ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು : 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ (ಮೇ 9) ಪ್ರಕಟವಾಗಿದೆ. ಇದರ ಬೆನ್ನಲ್ಲೇ ಈಗ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ ಬಿಡುಗಡೆಯಾಗಿದೆ.
ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಇನ್ನೂ ಉತ್ತಮ ಅಂಕಗಳನ್ನು ಗಳಿಸಲು ಪರೀಕ್ಷಾ ಮಂಡಳಿ ಅವಕಾಶ ಕಲ್ಪಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ (SSLC 2 Exam Time Table) ಪ್ರಕಟಿಸಲಾಗಿದೆ. ಜೂನ್‌ 7ರಿಂದ 14ರ ವರೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30ರವರೆಗೆ ಪರೀಕ್ಷೆಗಳು ನಡೆಯಲಿವೆ. ಪ್ರತಿ ವಿಷಯಕ್ಕೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ
7-6-2024- ಪ್ರಥಮ ಭಾಷೆ
8-6-2024- ತೃತೀಯ ಭಾಷೆ
10-6-2024- ಗಣಿತ, ಸಮಾಜ ಶಾಸ್ತ್ರ
11-6-2024- ಅರ್ಥ ಶಾಸ್ತ್ರ, ಎಲಿಮೆಂಟ್ಸ್‌ ಆಫ್‌ ಎಲೆಕ್ಟ್ರಿಕಲ್‌ ಇಂಜಿನಿಯರಿಂಗ್‌
12-6-2024- ವಿಜ್ಞಾನ ಹಾಗೂ ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
13-6-2024- ದ್ವಿತೀಯ ಭಾಷೆ (ಇಂಗ್ಲೀಷ್‌ ಹಾಗೂ ಕನ್ನಡ)
14-6-2024 – ಸಮಾಜ ವಿಜ್ಞಾನ
ಜೂನ್‌ 15ರಂದು ಜೆಟಿಎಸ್‌ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಡೆಸಲಾಗುತ್ತದೆ. ಸಬ್ಜೆಕ್ಟ್‌ ಕೋಡ್‌ 15 ಮತ್ತು 60ರ ವಿಷಯಗಳು ಆದರ್ಶ ವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತವೆ. ಹಿಂದೂಸ್ತಾನಿ ಸಂಗೀತ ಮತ್ತು ಕರ್ನಾಟಕ ಸಂಗೀತ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2 ಗಂಟೆಯಿಂದ ಸಾಯಂಕಾಲ 5: 15 ರವರೆಗೆ ನಿಗದಿಪಡಿಸಿದೆ. ಈ ವಿಷಯಗಳ ತಾತ್ವಿಕ ಪರೀಕ್ಷೆಯನ್ನು ಮಧ್ಯಾಹ್ನ 2 ಗಂಟೆಯಿಂದ ಮಧ್ಯಾಹ್ನ 3:45 ಗಂಟೆಯವರೆಗೆ ಹಾಗೂ ಪ್ರಾಯೋಗಿಕ ಪರೀಕ್ಷೆಯನ್ನು ಮಧ್ಯಾಹ್ನ 3: 45 ರಿಂದ ಸಾಯಂಕಾಲ 5:15 ಗಂಟೆಯವರೆಗೆ ನಡೆಸಲಾಗುವುದು.

ಪ್ರಮುಖ ಸುದ್ದಿ :-   ಬಿಜೆಪಿ ಶಾಸಕ ಹರೀಶ ಪೂಂಜಾ ವಿರುದ್ಧ ಪ್ರಕರಣ ದಾಖಲು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement