ಎಸ್ ಎಸ್ ಎಲ್‌ ಸಿ ಪರೀಕ್ಷೆ : ನೂರಕ್ಕೆ ನೂರು ಫಲಿತಾಂಶ ಪಡೆದ ಧಾರವಾಡ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

ಧಾರವಾಡ : ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ೨೦೨೩-೨೪ ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶವು ನೂರಕ್ಕೆ ೧೦೦ ರಷ್ಟಾಗಿದೆ. ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ.
ಪರೀಕ್ಷೆಗೆ ಒಟ್ಟು ೧೦೯ ಹಾಜರಾಗಿದ್ದು, ಅವರಲ್ಲಿ ೩೯ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ೬೭ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ ಮೂವರು ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದರು.
ವಿದ್ಯಾರ್ಥಿನಿ ಭುವನೇಶ್ವರಿ ಬೇವಿನಕಟ್ಟಿ ೬೨೫ಕ್ಕೆ ೬೧೬ ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಸೃಷ್ಟಿ ಚನ್ನಪ್ಪಗೌಡರ್ ೬೨೫ಕ್ಕೆ ೬೧೦ ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಹಾಗೂ ಸಿದ್ಧಾಂತ ನಾಯಕ್ ೬೨೫ಕ್ಕೆ ೬೦೫ ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಜನತಾ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕಾರ್ಯಾಧ್ಯಕ್ಷರಾದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಶಾಲೆಯ ಪ್ರಾಚಾರ್ಯೆ ಉಷಾ ಸಂತೋಷ ಹಾಗೂ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement