ಎಸ್.ಎಸ್.ಎಲ್.ಸಿ ಫಲಿತಾಂಶ : ಕುಮಟಾ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಪ್ರೌಢಶಾಲೆ ನೂರಕ್ಕೆ ನೂರು ಫಲಿತಾಂಶ, ರಾಜ್ಯಮಟ್ಟದಲ್ಲಿ 7 ರ‍್ಯಾಂಕ್‌

 ಕುಮಟಾ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಶಾಲೆಗೆ ನೂರಕ್ಕೆ ನೂರು ಫಲಿತಾಂಶ ಬಂದಿದ್ದು, ರಾಜ್ಯಕ್ಕೆ ಏಳು ರ‍್ಯಾಂಕ್‌ ಗಳಿಸಿದ್ದಾರೆ. ಪರೀಕ್ಷೆ ಬರೆದ ಒಟ್ಟೂ 154 ವಿದ್ಯಾರ್ಥಿಗಳಲ್ಲಿ, 105 ಮಂದಿ ಡಿಸ್ಟಿಂಕ್ಷನ್‌, ಹಾಗೂ 49 ಮಂದಿ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ.
ಕಾರ್ತಿಕ ರಾವುತ್ಕರ 625 ಕ್ಕೆ 621 (ಶೇ. 99.36) ಅಂಕ ಪಡೆದು ರಾಜ್ಯಕ್ಕೆ 5ನೇ ಸ್ಥಾನ, ಭೂಮಿಕಾ ಸತೀಶ ನಾಯ್ಕ 625 ಕ್ಕೆ 620 (ಶೇ. 99.20) ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ಸ್ಥಾನ, ಸುನಂದಾ ಶಾನಭಾಗ ಹಾಗೂ ವೈಷ್ಣವಿ ನಾಯ್ಕ 625 ಕ್ಕೆ 619 (ಶೇ. 99.04) ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ಸ್ಥಾನ, ರೋಶನಿ ಆರ್‌. 625 ಕ್ಕೆ 617 (ಶೇ. 98.72) ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ಸ್ಥಾನ, ವೈಷ್ಣವಿ ನಾಗೇಕರ ಹಾಗೂ ಕನ್ನಿಕಾ ಭಟ್ಟ 625 ಕ್ಕೆ 616 (ಶೇ. 98.56) ಅಂಕಗಳೊಂದಿಗೆ ರಾಜ್ಯಕ್ಕೆ 10ನೇ ಸ್ಥಾನ ಪಡೆದಿದ್ದು, ಈ 7 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಟಾಪ್‌-10 ರ‍್ಯಾಂಕ್‌ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಪ್ರಥಮ ಭಾಷೆಯಲ್ಲಿ 37, ದ್ವಿತೀಯ ಭಾಷೆಯಲ್ಲಿ 23, ತೃತೀಯ ಭಾಷೆಯಲ್ಲಿ 47, ಗಣಿತದಲ್ಲಿ 7, ವಿಜ್ಞಾನದಲ್ಲಿ 1, ಸಮಾಜ ವಿಜ್ಞಾನದಲ್ಲಿ 8 ಮಂದಿ ವಿದ್ಯಾರ್ಥಿಗಳು ಪೂರ್ಣಾಂಕದ ಸಾಧನೆ ಮಾಡಿದ್ದಾರೆ. 4 ವಿದ್ಯಾರ್ಥಿಗಳು 99% ಕ್ಕಿಂತ ಅಧಿಕ, 9 ವಿದ್ಯಾರ್ಥಿಗಳು 98% ಕ್ಕಿಂತ ಅಧಿಕ, 34 ವಿದ್ಯಾರ್ಥಿಗಳು 95% ಕ್ಕಿಂತ ಅಧಿಕ, 33 ವಿದ್ಯಾರ್ಥಿಗಳು 90% ಕ್ಕಿಂತ ಅಧಿಕ ಅಂಕಗಳನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕೊಂಕಣ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ವಿಶ್ವಸ್ಥ ಮಂಡಳಿಯ ಸದಸ್ಯರು, ಶೈಕ್ಷಣಿಕ ಸಲಹೆಗಾರರಾದ ಆರ್.ಎಚ್.ದೇಶಭಂಡಾರಿ, ಮುಖ್ಯಾಧ್ಯಾಪಕಿ ಸುಮಾ ಪ್ರಭು ಹಾಗೂ ಶಿಕ್ಷಕರು, ಸಿಬ್ಬಂದಿ ಅಭಿನಂದಿಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement