ಲೈಂಗಿಕ ದೌರ್ಜನ್ಯ ಆರೋಪ: ಜನಸಾಮಾನ್ಯರಿಗೆ ರಾಜಭವನದ ಸಿಸಿಟಿವಿ ದೃಶ್ಯಾವಳಿ ತೋರಿಸಿದ ಪಶ್ಚಿಮ ಬಂಗಾಳದ ರಾಜ್ಯಪಾಲ

ಕೋಲ್ಕತ್ತಾ: ರಾಜಭವನದ ಮಹಿಳಾ ಉದ್ಯೋಗಿಯೊಬ್ಬರು ತಮ್ಮ ವಿರುದ್ಧ ಕಿರುಕುಳದ ಆರೋಪ ಹೊರಿಸಿದ ಹಿನ್ನೆಲೆಯಲ್ಲಿ, ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಗುರುವಾರ ಮೇ 2ರ ರಾಜಭವನದ ಸಿಸಿಟಿವಿ ದೃಶ್ಯಾವಳಿಗಳನ್ನು ಜನಸಾಮಾನ್ಯರಿಗೆ ತೋರಿಸಿದ್ದಾರೆ.
ಮೇ 2ರ ಸಂಜೆ 5:30ರ ಸಮಯದ ಮುಖ್ಯ (ಉತ್ತರ) ಗೇಟ್‌ನಲ್ಲಿರುವ ಎರಡು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ರಾಜಭವನದ ನೆಲ ಮಹಡಿಯಲ್ಲಿರುವ ಸೆಂಟ್ರಲ್ ಮಾರ್ಬಲ್ ಹಾಲ್‌ನಲ್ಲಿ ಕೆಲವು ಜನರಿಗೆ ತೋರಿಸಲಾಯಿತು.
ಏಪ್ರಿಲ್ 24 ಮತ್ತು ಮೇ 2 ರಂದು ರಾಜ್ಯಪಾಲರ ಭವನದಲ್ಲಿ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ರಾಜಭವನದ ಗುತ್ತಿಗೆ ಮಹಿಳಾ ಉದ್ಯೋಗಿಯೊಬ್ಬರು ಶುಕ್ರವಾರ ಕೋಲ್ಕತ್ತಾ ಪೊಲೀಸರಿಗೆ ಲಿಖಿತ ದೂರು ನೀಡಿದ್ದಾರೆ.

‘ಸಚ್ ಕೆ ಸಾಮ್ನೆ’ ಕಾರ್ಯಕ್ರಮದ ಅಡಿಯಲ್ಲಿ ಬಿಡುಗಡೆ ಮಾಡಲಾದ ರಾಜ್ಯಪಾಲರ ಕಚೇರಿ ಹೇಳಿಕೆಯು “ರಾಜಕಾರಣಿ” ಮಮತಾ ಬ್ಯಾನರ್ಜಿ ಮತ್ತು “ಅವರ” ಪೊಲೀಸರನ್ನು ಹೊರತುಪಡಿಸಿ ಜನಸಾಮಾನ್ಯರಿಗೆ ದೃಶ್ಯಗಳನ್ನು ತೋರಿಸುವುದಾಗಿ ತಿಳಿಸಿತ್ತು. ಒಂದು ಗಂಟೆಗೂ ಹೆಚ್ಚು ಅವಧಿಯ ದೃಶ್ಯಾವಳಿಗಳಲ್ಲಿ, ನೀಲಿ ಜೀನ್ಸ್ ಮತ್ತು ಟಾಪ್ ಧರಿಸಿದ ಮಹಿಳೆ ಪೊಲೀಸ್ ಔಟ್‌ಪೋಸ್ಟ್‌ಗೆ ಹೋಗುತ್ತಿರುವುದು ಕಂಡುಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನಿಗದಿತ ಭೇಟಿಗಾಗಿ ರಾಜಭವನ ಆವರಣದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿತ್ತು.
ಮೇ 3 ರಂದು ಪಶ್ಚಿಮ ಬಂಗಾಳದಲ್ಲಿ ಮೂರು ರಾಜಕೀಯ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡುವ ಮೊದಲು ಮೋದಿ ಅವರು ಮೇ 2 ರಂದು ರಾತ್ರಿ ರಾಜಭವನದಲ್ಲಿ ತಂಗಿದ್ದರು. ರಾಜಭವನದ ಅಧಿಕಾರಿಯೊಬ್ಬರು, “ಕನಿಷ್ಠ 92 ಜನರು ನಮಗೆ ಮೇಲ್ ಮಾಡಿದ್ದಾರೆ ಅಥವಾ ಕರೆ ಮಾಡಿದ್ದಾರೆ, ಸಿಸಿಟಿವಿ ದೃಶ್ಯಗಳನ್ನು ನೋಡಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ಕೆಲವವು ಜನರಿಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಹೇಳಿದ್ದರು. ಸಂದರ್ಶಕರಲ್ಲಿ ಒಬ್ಬರು, ತಮ್ಮನ್ನು ಪ್ರೊಫೆಸರ್ ತುಷಾರ್ ಕಾಂತಿ ಮುಖರ್ಜಿ ಎಂದು ಹೇಳಿಕೊಂಡಿದ್ದು, ತಾವು ಸಿಸಿಟಿವಿ ದೃಶ್ಯಗಳನ್ನು ನೋಡಿದ್ದಾಗಿ ಹೇಳಿದ್ದಾರೆ ಮತ್ತು ಮಹಿಳೆಯ ನಡವಳಿಕೆಯಲ್ಲಿ ಯಾವುದೇ ಅಸಹಜತೆ ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕಾಂಗ್ರೆಸ್‌ ನಾಯಕ ಅಧೀರ್‌ ಹೇಳಿಕೆ ತಿರಸ್ಕರಿಸಿದ ನಂತರ ಪಶ್ಚಿಮ ಬಂಗಾಳ ಕಾಂಗ್ರೆಸ್ ಕಚೇರಿ ಮುಂದಿನ ಮಲ್ಲಿಕಾರ್ಜುನ ಖರ್ಗೆ ಪೋಸ್ಟರ್‌ಗಳಿಗೆ ಮಸಿ

ಏನಿದು ಪ್ರಕರಣ?
ಏಪ್ರಿಲ್ 24 ಮತ್ತು ಮೇ 2 ರಂದು ರಾಜ್ಯಪಾಲರ ಭವನದಲ್ಲಿ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ರಾಜಭವನದ ಗುತ್ತಿಗೆ ಮಹಿಳಾ ಉದ್ಯೋಗಿಯೊಬ್ಬರು ಶುಕ್ರವಾರ ಕೋಲ್ಕತ್ತಾ ಪೊಲೀಸರಿಗೆ ಲಿಖಿತ ದೂರು ನೀಡಿದ್ದಾರೆ.
ಪಶ್ಚಿಮ ಬಂಗಾಳದ ರಾಜ್ಯಪಾಲರು ಆರೋಪಗಳನ್ನು ನಿರಾಕರಿಸಿದ್ದಾರೆ. “ಸತ್ಯವು ಜಯಗಳಿಸುತ್ತದೆ” ಮತ್ತು “ಸುಳ್ಳು ನಿರೂಪಣೆಗಗಳಿಗೆ ಹೆದರುವುದಿಲ್ಲ” ಎಂದು ಹೇಳಿದರು. ಅಲ್ಲದೆ, ತಮ್ಮ ವಿರುದ್ಧ ಮಹಿಳಾ ಉದ್ಯೋಗಿಯೊಬ್ಬರು ನೀಡಿದ ಕಿರುಕುಳದ ದೂರಿನ ಬಗ್ಗೆ ಕೋಲ್ಕತ್ತಾ ಪೊಲೀಸರಿಂದ ಯಾವುದೇ ಸಂವಹನವನ್ನು ನಿರ್ಲಕ್ಷಿಸುವಂತೆ ಎಲ್ಲಾ ರಾಜಭವನದ ಸಿಬ್ಬಂದಿಗೆ ನಿರ್ದೇಶನ ನೀಡಿದ ಮೂರು ದಿನಗಳ ನಂತರ ಈ ಕ್ರಮವು ಬಂದಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement