ಶಿವಕಾಶಿಯ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 8 ಮಂದಿ ಸಾವು

ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐವರು ಮಹಿಳಾ ಕಾರ್ಮಿಕರು ಸೇರಿದಂತೆ ಎಂಟು ಮಂದಿ ಸಾವಿಗೀಡಾಗಿದ್ದಾರೆ ಹಾಗೂ ಕೆಲವು ಮಂದಿಗೆ ಸುಟ್ಟಗಾಯಗಳಾಗಿವೆ ಎಂದು ವರದಿಯಾಗಿದೆ.
ತಮಿಳುನಾಡಿನ ವಿರುದುನಗರ ಜಿಲ್ಲೆಯ ಶ್ರೀ ಸುದರ್ಶನ್ ಪಟಾಕಿ ಕಾರ್ಖಾನೆಯಲ್ಲಿ ರಾಸಾಯನಿಕಗಳನ್ನು ನಿರ್ವಹಿಸುವಾಗ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗಾಗಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ಒಳಗೊಂಡಂತೆ ಗಾಯಾಳುಗಳನ್ನು ವಿರುದುನಗರ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯಿದ್ದಾರೆ.

ಸ್ಫೋಟದ ಸಮಯದಲ್ಲಿ ಉತ್ಪಾದನಾ ಘಟಕದಲ್ಲಿ ಸುಮಾರು ಹತ್ತು ಕಾರ್ಮಿಕರು ಇದ್ದರು ಎಂದು ವರದಿಗಳು ಸೂಚಿಸುತ್ತವೆ. “ಇದು ಪರವಾನಗಿ ಪಡೆದ ಘಟಕವಾಗಿದೆ. ಅವರು ಅಲಂಕಾರಿಕ ಪಟಾಕಿಗಳನ್ನು ತಯಾರಿಸುತ್ತಾರೆ. ರಾಸಾಯನಿಕಗಳ ಮಿಶ್ರಣದ ಸಮಯದಲ್ಲಿ ಸ್ಫೋಟ ಸಂಭವಿಸಿರಬಹುದು ಎಂದು ನಾವು ಅನುಮಾನಿಸುತ್ತೇವೆ. ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಜಿಲ್ಲಾ ಎಸ್ಪಿ ಕೆ ಫಿರೋಜ್ ಖಾನ್ ಅಬ್ದುಲ್ಲಾ NDTV ಗೆ ತಿಳಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಭಾರತದ ಪಟಾಕಿ ರಾಜಧಾನಿ ಎಂದೇ ಖ್ಯಾತಿ ಪಡೆದ ಶಿವಕಾಶಿ ಮಾರಣಾಂತಿಕ ಸ್ಫೋಟಗಳ ಸರಣಿಯನ್ನು ನೋಡುತ್ತಿದೆ. ಕಳೆದ ವರ್ಷ ಅಕ್ಟೋಬರ್ ತಿಂಗಳೊಂದರಲ್ಲೇ ಹದಿನೈದು ದಿನಗಳೊಳಗೆ 27 ಮಂದಿ ಸಾವಿಗೀಡಾಗಿದ್ದರು.
ಪ್ರಕರಣದಲ್ಲಿ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಜೀವಹಾನಿಗಳಿಗೆ ಸಂತಾಪ ಸೂಚಿಸಿದ್ದು, ಮಾದರಿ ಸಂಹಿತೆಯಿಂದಾಗಿ ಚುನಾವಣಾ ಆಯೋಗದ ಒಪ್ಪಿಗೆ ಪಡೆದ ನಂತರ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಒಂದೇ ಮತಗಟ್ಟೆಯಲ್ಲಿ 8 ಸಲ ಮತದಾನ ಮಾಡಿದ ಯುವಕ ; ವೀಡಿಯೋ ವೈರಲ್ ಆದ ನಂತರ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement