ಶಿವಮೊಗ್ಗ : ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರ ಬರ್ಬರ ಹತ್ಯೆ

ಶಿವಮೊಗ್ಗ: ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಬುಧವಾರ ಹಾಡಹಗಲೇ ಜೋಡಿ ಕೊಲೆ ನಡೆದಿದೆ., ಇಬ್ಬರು ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮತ್ತೊಬ್ಬ ಗಾಯಗೊಂಡಿದ್ದಾನೆ.
ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ರೌಡಿಗಳ ನಡುವೆ ನಡೆದ ಗಲಾಟೆಯಿಂದಾಗ ಮರ್ಡರ್ ಆಗಿರಬಹುದು ಎಂದು ಶಂಕಿಸಲಾಗಿದೆ. ಲಷ್ಕರ್ ಮೊಹಲ್ಲಾದ ಜನತಾ ಮೀನಿನ ಮಾರ್ಕೆಟ್‌ ಬಳಿ ಈ ಘಟನೆ ನಡೆದಿದ್ದು, ಹತ್ಯೆಯಾದ ಯುವಕರನ್ನು ಗೌಸ್(30) ಮತ್ತು ಸುಹೈಲ್‌ (35) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದೇ ವೇಳೆ ರೌಡಿ ಶೀಟರ್ ಯಾಸೀನ್ ಎಂಬಾತನ ಮೇಲೆಯೂ ಮಾರಣಾಂತಿಕ ದಾಳಿ ಮಾಡಲಾಗಿದೆ. ಈ ವೇಳೆ ದುಷ್ಕರ್ಮಿಗಳ ತಂಡದಿಂದ ತಪ್ಪಿಸಿಕೊಂಡ ಯಾಸೀನ್ ನಂತರ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಇಬ್ಬರೂ ರಸ್ತೆಯಲ್ಲಿ ಹೋಗುತ್ತಿರುವಾಗ ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳ ತಂಡವು ಮಚ್ಚು, ಲಾಂಗು ಹಾಗೂ ಹರಿತವಾದ ಆಯುಧಗಳಿಂದ ಹಲ್ಲೆ ಮಾಡಿದ್ದಾರೆ. ಹಾಗೂ ಇಬ್ಬರ ಮುಖಗಳ ಗುರುತು ಸಿಗಬಾರದೆಂದು ರಸ್ತೆಯ ಬದಿ ಚರಂಡಿಗಳಿಗೆ ಹಾಕಲಾಗಿದ್ದ ದೊಡ್ಡ ದೊಡ್ಡ ಕಲ್ಲುಗಳನ್ನು ಅವರ ತಲೆ ಮೇಲೆ ಎತ್ತಿ ಹಾಕಿದ್ದಾರೆ. ಘಟನಾ ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಅಂಜಲಿ ಹತ್ಯೆ ಪ್ರಕರಣ : ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement