ದೆಹಲಿ ಸಿಎಂ ಅರವಿಂದ ಕೇಜ್ರಿವಾಲಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಅಬಕಾರಿ ನೀತಿ ಪ್ರಕರಣದ ಭಾಗವಾಗಿ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ತಿಹಾರ್‌ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಜೂನ್‌ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ ಮತ್ತು ದೀಪಂಕರ ದತ್ತ ನೇತೃತ್ವದ ವಿಭಾಗೀಯ ಪೀಠವು ಇಂದು, ಶುಕ್ರವಾರ (ಮೇ ೧೦) ಆದೇಶ ಪ್ರಕಟಿಸಿತು. ಜೂನ್ 2 ರೊಳಗೆ ತಿಹಾರ ಜೈಲು ಅಧಿಕಾರಿಗಳ ಮುಂದೆ ಶರಣಾಗಬೇಕು ಎಮದು ತಿಳಿಸಿದೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರ ಮಾಡಲು ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡುವ ಕುರಿತು ಸುಪ್ರೀಂ ಕೋರ್ಟ್ ನೀಡಿದ್ದ‌ ಸಲಹೆಗೆ ಜಾರಿ ನಿರ್ದೇಶನಾಲಯವು ಗುರುವಾರ ವಿರೋಧ ವ್ಯಕ್ತಪಡಿಸಿತ್ತು.

ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವಲ್ಲಿ, ಬಿಡುಗಡೆಯ ಅವಧಿಯ ಬಗ್ಗೆ ವಾದಗಳನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿತು, “21 ದಿನಗಳು (ಜಾಮೀನಿನ ಅವಧಿ) ಯಾವುದೇ ವ್ಯತ್ಯಾಸ ಉಂಟುಮಾಡುವುದಿಲ್ಲ” ಎಂದು ಹೇಳಿತು. ಇ.ಡಿ. ಎರಡು ವರ್ಷಗಳ ಹಿಂದೆ ಪ್ರಕರಣವನ್ನು ದಾಖಲಿಸಿದೆ ಮತ್ತು ಕೇಜ್ರಿವಾಲ್ ಅವರನ್ನು ಮಾರ್ಚ್ 2024 ರಲ್ಲಿ ಮಾತ್ರ ಬಂಧಿಸಲಾಯಿತು.
ಒಂದೂವರೆ ವರ್ಷಗಳ ಕಾಲ ಅವರು ಅಲ್ಲಿದ್ದರು … ಚುನಾವಣೆಯ ಮೊದಲು ಅಥವಾ ನಂತರ ಅವರನ್ನು ಬಂಧಿಸಬಹುದಿತ್ತು. ಅದು ಏನೇ ಇರಲಿ, 21 ದಿನಗಳು ಇಲ್ಲಿ ಅಥವಾ ಅಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡುವುದಿಲ್ಲ ಎಂದು ನ್ಯಾಯಾಲಯವು ಇ.ಡಿ.ಗೆ ತಿಳಿಸಿದೆ.

ಪ್ರಮುಖ ಸುದ್ದಿ :-   ಪಿಕಪ್ ವಾಹನ ಪಲ್ಟಿಯಾಗಿ 18 ಮಂದಿ ಸಾವು, ನಾಲ್ವರಿಗೆ ಗಾಯ

ಕೇಜ್ರಿವಾಲ್‌ ಮಾರ್ಚ್‌ 21ರಂದು ಬಂಧಿತರಾಗಿದ್ದು, ತಿಹಾರ್‌ ಜೈಲಿನಲ್ಲಿದ್ದಾರೆ. ಜಾರಿ ನಿರ್ದೇನಾಲಯದ ಬಂಧನ ಪ್ರಶ್ನಿಸಿ ಅವರು‌ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್‌ ನಲ್ಲಿ ನಡೆಯುತ್ತಿದ್ದು, ಇದರ ಭಾಗವಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈಚೆಗೆ ದೆಹಲಿ ಹೈಕೋರ್ಟ್‌ ಕೇಜ್ರಿವಾಲ್‌ ಅರ್ಜಿ ವಜಾ ಮಾಡಿದ ನಂತರ ಕೇಜರಿವಾಲ್‌ ಅವರು ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.
ಮೇ 7ರ ವಿಚಾರಣೆಯಂದು ಸುಪ್ರೀಂ ಕೋರ್ಟ್‌ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಮಾಡಲು ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಸಿಕ್ಕಿದರೂ ಮುಖ್ಯಮಂತ್ರಿಯಾಗಿ ಯಾವುದೇ ಅಧಿಕೃತ ಕರ್ತವ್ಯ ನಿರ್ವಹಿಸಲು ಅನುಮತಿಸುವುದಿಲ್ಲ ಎಂದು ಹೇಳಿತ್ತು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement