ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣ : ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಮುಂಬೈ: ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಪುಣೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಹಾಗೂ ಮೂವರನ್ನು ಖುಲಾಸೆಗೊಳಿಸಿದೆ.
ಆರೋಪಿಗಳಾದ ಸಚಿನ್‌ ಅಂದೂರೆ, ಶರದ್‌ ಕಲಾಸ್ಕರ್‌ ಅವರನ್ನು ದೋಷಿಗಳು ಎಂದು ತೀರ್ಪು ನೀಡಿರುವ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ಹಾಗೂ ₹5 ಲಕ್ಷ ದಂಡ ವಿಧಿಸಿದೆ. ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ವೀರೇಂದ್ರ ಸಿಂಗ್‌ ತಾವ್ಡೆ, ಸನಾತನ ಸಂಸ್ಥೆಯ ವಿಕ್ರಮ ಭಾವೆ ಹಾಗೂ ಸಂಜೀವ ಪುನಾಲೇಖರ್‌ ಅವರನ್ನು ನಿರ್ದೋಷಿಗಳೆಂದು ಕೋರ್ಟ್‌ ತೀರ್ಪು ನೀಡಿತು.. 2021ರಲ್ಲಿ ಈ ಪ್ರಕರಣದ ವಿಚಾರಣೆ ಆರಂಭವಾಗಿತ್ತು.
ಮಹಾರಾಷ್ಟ್ರ ಅಂಧಶ್ರದ್ಧಾ ನಿರ್ಮೂಲನಾ ಸಮಿತಿಯ ಸಂಸ್ಥಾಪಕರಾದ ನರೇಂದ್ರ ದಾಭೋಲ್ಕರ ಅವರನ್ನು ಇಬ್ಬರು ದುಷ್ಕರ್ಮಿಗಳು 2013ರಲ್ಲಿ ಪುಣೆಯಲ್ಲಿ ಗುಂಡಿಕ್ಕಿ ಕೊಂದಿದ್ದರು. ಆರೋಪಿಗಳನ್ನು ಕೇಂದ್ರೀಯ ತನಿಖಾ ತಂಡವು 2016 ರಿಂದ 2019ರ ಅವಧಿಯಲ್ಲಿ ಬಂಧಿಸಿತ್ತು.

2014ರಲ್ಲಿ ಪುಣೆ ನಗರ ಪೊಲೀಸರಿಂದ ಸಿಬಿಐಗೆ ಪ್ರಕರಣ ವರ್ಗಾವಣೆಯಾಗಿದ್ದು, ಐವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. ವಿಚಾರಣೆಯಲ್ಲಿ ಸರ್ಕಾರಿ ಪರ ವಕೀಲರು 20 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿದರೆ, ಆರೋಪಿ ಪರ ವಕೀಲರು ಇಬ್ಬರು ಸಾಕ್ಷಿಗಳನ್ನು ವಿಚಾರಣೆಗೊಳಿಸಿದರು.
ಆರೋಪಿಗಳಾದ ಡಾ. ವೀರೇಂದ್ರ ಸಿಂಗ್‌ ತಾವಡೆ, ಸಚಿನ್‌ ಅಂದೂರೆ, ಶರದ್‌ ಶರದ್‌ ಕಲಾಸ್ಕರ್‌ ಮತ್ತು  ವಿಕ್ರಮ ಭಾವೆ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 302 (ಕೊಲೆ), 120ಬಿ (ಕ್ರಿಮಿನಲ್‌ ಪಿತೂರಿ) ಅಡಿ ಪ್ರಕರಣ ದಾಖಲಿಸಲಾಗಿತ್ತು.
ನರೇಂದ್ರ ದಾಬೋಲ್ಕರ್‌ ಹತ್ಯೆಯನ್ನು ಆರಂಭದಲ್ಲಿ ಸ್ಥಳೀಯ ಪೊಲೀಸರು ವಿಚಾರಣೆ ನಡೆಸುತ್ತಿದ್ದರು. 2014ರಲ್ಲಿ ಬಾಂಬೆ ಹೈಕೋರ್ಟ್‌ ಆದೇಶದ ಮೇರೆಗೆ ಸಿಬಿಐಗೆ ತನಿಖೆಯನ್ನು ವಹಿಸಲಾಯಿತು.

ಪ್ರಮುಖ ಸುದ್ದಿ :-   ವೀಡಿಯೊ..| ಒಂದೇ ಮತಗಟ್ಟೆಯಲ್ಲಿ 8 ಸಲ ಮತದಾನ ಮಾಡಿದ ಯುವಕ ; ವೀಡಿಯೋ ವೈರಲ್ ಆದ ನಂತರ ಬಂಧನ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement