ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಗಾಳಿ ಮಳೆ ಮುನ್ಸೂಚನೆ

ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮೇ 17 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೀದರ್ ನಿಂದ ಚಾಮರಾಜನಗರದ ವರೆಗೂ ಮಳೆಯಾಗುವ ಲಕ್ಷಣವಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ಮೇ 10 ರಂದು ಬೀದರ, ಬೆಳಗಾವಿ, ಧಾರವಾಡ, ವಿಜಯನಗರ, ಶಿವಮೊಗ್ಗ, ರಾಯಚೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು, ಮೈಸೂರು, ತುಮಕೂರು, ಕೋಲಾರ, ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮೇ 13 ರಿಂದ ಮೇ 15ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೀದರ, ಕಲಬುರ್ಗಿ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಾವಣಗೆರೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ ನೀಡಲಾಗಿದೆ. ಮೇ 17ರಂದು ಮಳೆ ಮತ್ತಷ್ಟು ತೀವ್ರತೆ ಪಡೆಯಲಿದೆ ಎಂದು ತಿಳಿಸಲಾಗಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಪ್ರಮುಖ ಸುದ್ದಿ :-   ಕುಮಟಾ : ತದಡಿ ಬಳಿ ಪ್ರವಾಸಿಗರ ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ ; 40 ಜನರ ರಕ್ಷಣೆ

ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಕೋಲಾರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ರಾಜ್ಯದ ಹಲವೆಡೆ ಭಾರೀ ಮಳೆಯೊಂದಿಗೆ ಗುಡುಗು ಸಹಿತ ಬಿರುಗಾಳಿ (ಗಂಟೆಗೆ 40-50 ಕಿ.ಮೀ) ಬೀಸಲಿದೆ. ಹೀಗಾಗಿ ಐಎಂಡಿ ಹಳದಿ ಎಚ್ಚರಿಕೆಯನ್ನು ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement