ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ಮುಖಂಡ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಹಾಸನ : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಹಾಸನ ಬಿಜೆಪಿ ಮುಖಂಡ ಹಾಗೂ ವಕೀಲ ಡಿ. ದೇವರಾಜೇಗೌಡ ಅವರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ನ್ಯಾಯಾಲಯವು ಶನಿವಾರ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ.
ಆರೋಪಿ ದೇವರಾಜೇಗೌಡ ಅವರನ್ನು ಶನಿವಾರ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ಎಸ್‌. ಸಿದ್ದರಾಮ ಅವರ ನಿವಾಸದಲ್ಲಿ ಹಾಜರುಪಡಿಸಲಾಯಿತು.
ಪ್ರಕರಣದ ಮಾಹಿತಿ ಪಡೆದ ನ್ಯಾಯಾಧೀಶರು ಆರೋಪಿ ದೇವರಾಜೇಗೌಡ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದರು. ಇದಕ್ಕೂ ಮುನ್ನ, ಆರೋಪಿಯನ್ನು ಪೊಲೀಸರು ಚಿತ್ರದುರ್ಗದ ಹಿರಿಯೂರು ಸಮೀಪ ಶುಕ್ರವಾರ ವಶಕ್ಕೆ ಪಡೆದಿದ್ದರು.
ಹತ್ತು ತಿಂಗಳ ಹಿಂದೆ ಪರಿಚಯವಾಗಿದ್ದ ದೇವರಾಜೇಗೌಡ ಆಗಾಗ ಫೋನ್ ಮಾಡಿ ಹೊಳೆನರಸೀಪುರದಲ್ಲಿ ಮನೆ ಕಟ್ಟಿಸಿಕೊಡುತ್ತೇನೆ ಎಂದು ನಂಬಿಸಿ ಹಾಸನಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ನಂತರ ಅಶ್ಲೀಲ ವೀಡಿಯೊ ಚಿತ್ರೀಕರಣ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಹೊಳೆನರಸೀಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement