ಜತ್ತ ಬಳಿ ಕ್ರೂಸರ್ ವಾಹನ ಅಪಘಾತ : ಅಥಣಿಯ ಮೂವರು ಮಹಿಳೆಯರು ಸಾವು

ಬೆಳಗಾವಿ : ಮಹಾರಾಷ್ಟ್ರದ ಜತ್ತ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಬೆಳಗಾವಿ ಅಥಣಿ ತಾಲ್ಲೂಕಿನ ಬಳ್ಳಿಗೇರಿಯ ಮೂವರು ಮಹಿಳೆಯರು ಮೃತಪಟ್ಟ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ.
ಕ್ರೂಸರ್ ವಾಹನದ ಎಡಬದಿಯ ಟೈಯರ್‌ ಸ್ಫೋಟಗೊಂಡು ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತರನ್ನು ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ ಹೊರಟಿದ್ದರು ಎನ್ನಲಾಗಿದೆ.
ಈ ವಾಹನದಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

ನಿಮ್ಮ ಕಾಮೆಂಟ್ ಬರೆಯಿರಿ

advertisement