ಕರ್ನಾಟಕ ವಿಧಾನ ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ ಬೆನ್ನಲ್ಲೇ ಪರಿಷತ್‌ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಪರಿಷತ್ತಿನ 6 ಕ್ಷೇತ್ರಗಳ ಪೈಕಿ ಐದು ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧಿಸುತ್ತಿದೆ. ಒಂದು ಸ್ಥಾನವನ್ನು ಜೆಡಿಎಸ್‌ಗೆ ನೀಡಲಾಗಿದೆ. ಈಶಾನ್ಯ ಪದವೀಧರ, ನೈರುತ್ಯ, ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕರ ಕ್ಷೇತ್ರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಸ್ಪರ್ಧಿಸುತ್ತಿದ್ದು, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಸ್ಪರ್ಧೆ ಮಾಡುತ್ತಿದೆ.
ಬಿಜೆಪಿ ಅಭ್ಯರ್ಥಿಗಳ ಪಟ್ಟಿ
ಈಶಾನ್ಯ ಪದವೀಧರ – ಅಮರನಾಥ ಪಾಟೀಲ
ನೈರುತ್ಯ ಪದವೀಧರ – ಡಾ ಧನಂಜಯ ಸರ್ಜಿ
ಬೆಂಗಳೂರು ಪದವೀಧರ ಕ್ಷೇತ್ರ- ಅ. ದೇವೇಗೌಡ
ಆಗ್ನೇಯ ಶಿಕ್ಷಕರ ಕ್ಷೇತ್ರ – ವೈ.ಎ. ನಾರಾಯಣ ಸ್ವಾಮಿ
ದಕ್ಷಿಣ ಶಿಕ್ಷಕರ – ಇ.ಸಿ. ನಿಂಗರಾಜು ಅವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. ಜೆಡಿಎಸ್‌ನಿಂದ ಹಾ;ಇ ಸದಸ್ಯ ಎಸ್ ಎಲ್ ಭೋಜೇಗೌಡ ಸ್ಪರ್ಧೆ  ಬಹುತೇಕ ಖಚಿತವಾಗಿದೆ.
ಆರು ಕ್ಷೇತ್ರಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ. ಮೇ 9ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು, ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮೇ 20 ಕೊನೆಯ ದಿನವಾಗಿದೆ. ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement