ಕರ್ನಾಟಕದಲ್ಲಿ ಮೇ 13ರಿಂದ ಎರಡ್ಮೂರು ದಿನ ಜೋರು ಮಳೆ ಸಾಧ್ಯತೆ ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಶನಿವಾರ ಹಾಗೂ ಭಾನುವಾರ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನಿಂದ ಕೂಡಿದ ಮಳೆ ಸುರಿದಿದೆ. ಮೇ 13ರಿಂದ ರಾಜ್ಯದಲ್ಲಿ ಮೂರು ದಿನ ವ್ಯಾಪಕ ಮಳೆಯಾಗುವ ಸಂಭವವಿದ್ದು, ಹವಾಮಾನ ಇಲಾಖೆ ಕೆಲ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ, … Continued

ವೀಡಿಯೊ…| ವಂದೇ ಭಾರತ ರೈಲಿನಡಿ ಸಿಲುಕಿದ ಹಸು ; ಪ್ರಾಣಾಪಾಯದಿಂದ ಪಾರಾಗಿದ್ದೇ ಒಂದು ವಿಸ್ಮಯ..

ಮುಂಬೈ: ಇತ್ತೀಚೆಗಿನ ದಿನಗಳಲ್ಲಿ ದೇಶದಾದ್ಯಂತ ವೇಗವಾಗಿ ಬರುತ್ತಿರುವ ವಂದೇ ಭಾರತ ಎಕ್ಸ್‌ಪ್ರೆಸ್ ರೈಲಿಗೆ ಹಸುಗಳು ಢಿಕ್ಕಿ ಹೊಡೆದ ಘಟನೆಗಳು ವರದಿಯಾಗುತ್ತಿವೆ. ವೇಗವಾಗಿ ಬರುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಡಿಕ್ಕಿಯಾಗಿ ಹಲವು ಹಸುಗಳು ಸಾವಿಗೀಡಾಗಿವೆ. ಆದರೆ, ಈ ಅಪರೂಪದ ಘಟನೆಯಲ್ಲಿ ವಂದೇ ಭಾರತ ಎಕ್ಸ್‌ಪ್ರೆಸ್ ರೈಲಿನ ಲೋಕೋಮೋಟಿವ್ ಪೈಲಟ್ ತುರ್ತು ಬ್ರೇಕ್ ಹಾಕಿ ಅಚ್ಚರಿಯ ರೀತಿಯಲ್ಲಿ … Continued

ತಾಯಂದಿರ ದಿನದಂದು ಚುನಾವಣಾ ಸಮಾವೇಶದಲ್ಲಿ ಇಬ್ಬರಿಂದ ಅನಿರೀಕ್ಷಿತ ಉಡುಗೊರೆ ಪಡೆದ ಪ್ರಧಾನಿ ಮೋದಿ..| ವೀಕ್ಷಿಸಿ

ಭಾನುವಾರ ಬಂಗಾಳದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೃದಯ ತುಂಬಿ ಬರುವ ಕ್ಷಣವನ್ನು ಅನುಭವಿಸಿದರು. ಹೂಗ್ಲಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ, ಸಭೆಯ ಮಧ್ಯದಲ್ಲಿ ಇಬ್ಬರು ವ್ಯಕ್ತಿಗಳು ತಮ್ಮ ತಾಯಿ ದಿವಂಗತ ಹೀರಾಬೆನ್ ಮೋದಿ ಅವರ ಭಾವಚಿತ್ರಗಳನ್ನು ಹಿಡಿದಿರುವುದನ್ನು ಗಮನಿಸಿದರು. ಪ್ರಧಾನಿಯವರು ಅವರ ಪ್ರಯತ್ನವನ್ನು ಗುರುತಿಸಿದರು ಮತ್ತು ತಾಯಂದಿರ ದಿನವನ್ನು ಗುರುತಿಸುವ … Continued

ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಪಾಸಣೆ: ಚುನಾವಣಾಧಿಕಾರಿಗಳ ವಿರುದ್ಧ ಕಾಂಗ್ರೆಸ್‌ ಕಿಡಿ

ಪಾಟ್ನಾ : ಬಿಹಾರದ ಸಮಸ್ತಿಪುರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಖರ್ಗೆ ಅವರ ಹೆಲಿಕಾಪ್ಟರ್‌ನ್ನು ತಪಾಸಣೆ ನಡೆಸಿದ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಜೇಶ ರಾಥೋರ ಅವರು ಚುನಾವಣಾ ಆಯೋಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷಗಳ ನಾಯಕರನ್ನು ಚುನಾವಣಾಧಿಕಾರಿಗಳು ಗುರಿಯಾಗಿಸುತ್ತಿದ್ದಾರೆ. ಬಿಜೆಪಿ ನೇತೃತ್ವದ ಎನ್‍ಡಿಎ ನಾಯಕರಿಗೆ ಮಾತ್ರ ಮುಕ್ತವಾಗಿ … Continued

ಪ್ರಜ್ವಲ್ ರೇವಣ್ಣ ಪ್ರಕರಣ : ಮಾಜಿ ಶಾಸಕ ಪ್ರೀತಂಗೌಡ ಆಪ್ತರನ್ನು ವಶಕ್ಕೆ ಪಡೆದ ಎಸ್ಐಟಿ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ಅಧಿಕಾರಿಗಳು(ಎಸ್ಐಟಿ) ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂಗೌಡ ಆಪ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಪ್ರೀತಂಗೌಡ ಆಪ್ತರಾದ ಲಿಖಿತ್ ಮತ್ತು ಕಚೇರಿಯ ಸಿಬ್ಬಂದಿ ಚೇತನ ಎಂಬವರನ್ನು ಎಸ್ಐಟಿ ವಶಕ್ಕೆ ಪಡೆದಿದೆ. ಜೊತೆಗೆ ಇತರ ಇಬ್ಬರಿಗಾಗಿ … Continued

ರಸ್ತೆ ಅಪಘಾತದಲ್ಲಿ ಕನ್ನಡ ಕಿರುತೆರೆಯ ಜನಪ್ರಿಯ ನಟಿ ಪವಿತ್ರ ಜಯರಾಂ ಸಾವು

ಬೆಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ನಟಿ ಪವಿತ್ರಾ ಜಯರಾಂ (Pavithra Jayaram)ಆಂಧ್ರಪ್ರದೇಶದ ಕರ್ನೂಲು ಸಮೀಪ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್ ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ನಟಿ ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು, ಭಾನುವಾರ ಬೆಳಿಗ್ಗೆ ಆಂಧ್ರ ಪ್ರದೇಶದ … Continued

ಗರ್ಭಧಾರಣೆ ಕುರಿತ ಪುಸ್ತಕದಲ್ಲಿ ‘ಬೈಬಲ್’ ಪದ ಬಳಕೆ: ನಟಿ ಕರೀನಾ ಕಪೂರಗೆ ಮಧ್ಯಪ್ರದೇಶ ಹೈಕೋರ್ಟ್ ನೋಟಿಸ್

ಮುಂಬೈ: ಬಾಲಿವುಡ್ ನಟಿ ಕರೀನಾ ಕಪೂರ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ತಾವು ಬರೆದ ತಾಯ್ತನದ ಪುಸ್ತಕದಲ್ಲಿ ಬೈಬಲ್‌ ಪದ ಬಳಸಿದ್ದಕ್ಕೆ ಅವರಿಗೆ ಮಧ್ಯಪ್ರದೇಶ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ. ಗರ್ಭಾವಸ್ಥೆ ಹಾಗೂ ತಾಯ್ತನಕ್ಕೆ ಸಂಬಂಧಿಸಿದಂತೆ ನಟಿ ಕರೀನಾ ಪುಸ್ತಕ ಬರೆದಿದ್ದು, ಇದಕ್ಕೆ ‘ಕರೀನಾ ಕಪೂರ್ ಖಾನ್ಸ್‌ ಪ್ರಗ್ನೆನ್ಸಿ ಬೈಬಲ್ ಎಂದು ಹೆಸರಿಟ್ಟಿದ್ದರು. ಆದರೆ ಹೀಗೆ … Continued

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರುವ ಮೂಲಕ ಹೊಸ ದಾಖಲೆ ನಿರ್ಮಿಸಿದ ಕಾಮಿ ರೀಟಾ ಶೆರ್ಪಾ

ಕಠ್ಮಂಡು: ‘ಎವರೆಸ್ಟ್ ಮ್ಯಾನ್’ ಎಂದು ಕರೆಯಲ್ಪಡುವ ನೇಪಾಳದ ಕಾಮಿ ರೀಟಾ ಶೆರ್ಪಾ ಅವರು ಭಾನುವಾರ ಬೆಳಿಗ್ಗೆ ವಿಶ್ವದ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ಅನ್ನು 29 ನೇ ಬಾರಿಗೆ ಏರುವ ಮೂಲಕ ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ. ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳ ಪ್ರಕಾರ, ದಾಖಲೆ ಸ್ಥಾಪಿಸಿದ ಆರೋಹಿ ಭಾನುವಾರ 7:25 AMಕ್ಕೆ ಎವರೆಸ್ಟ್ ಶಿಖರದ … Continued

ರಾಜ್ಯದ ಈ ಜಿಲ್ಲೆಗಳಲ್ಲಿ 6-7 ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕಾಗಿದ್ದು, ಒಂದು ವಾರದ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮೇ 12ರಿಂದ ಮೇ 16ರ ವರೆಗೆ ಜೋರಾಗಿ ಮಳೆಯಾಗಲಿದೆ. ಮೇ 17 ಮತ್ತು 18ರಂದು ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. … Continued