ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಪಾಸಣೆ: ಚುನಾವಣಾಧಿಕಾರಿಗಳ ವಿರುದ್ಧ ಕಾಂಗ್ರೆಸ್‌ ಕಿಡಿ

ಪಾಟ್ನಾ : ಬಿಹಾರದ ಸಮಸ್ತಿಪುರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.
ಖರ್ಗೆ ಅವರ ಹೆಲಿಕಾಪ್ಟರ್‌ನ್ನು ತಪಾಸಣೆ ನಡೆಸಿದ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಜೇಶ ರಾಥೋರ ಅವರು ಚುನಾವಣಾ ಆಯೋಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷಗಳ ನಾಯಕರನ್ನು ಚುನಾವಣಾಧಿಕಾರಿಗಳು ಗುರಿಯಾಗಿಸುತ್ತಿದ್ದಾರೆ. ಬಿಜೆಪಿ ನೇತೃತ್ವದ ಎನ್‍ಡಿಎ ನಾಯಕರಿಗೆ ಮಾತ್ರ ಮುಕ್ತವಾಗಿ ತೆರಳಲು ಅವಕಾಶ ನೀಡಲಾಗುತ್ತಿದೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.

ಮೇ 11 ರಂದು ಮಲ್ಲಿಕಾರ್ಜುನ ಖರ್ಗೆಯವರು ಬಿಹಾರದ ಸಮಸ್ತಿಪುರ ಮತ್ತು ಮುಜಾಫರ್‍ಪುರದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಭಾಗವಹಿಸಿದ್ದರು. ಈ ವೇಳೆ ಸಮಸ್ತಿಪುರದಲ್ಲಿ ಚುನಾವಣಾ ಅಧಿಕಾರಿಗಳು ಖರ್ಗೆಯವರ ಹೆಲಿಕಾಪ್ಟರ್‌ನ್ನು ತಪಾಸಣೆ ನಡೆಸಿದ್ದರು. ಅಲ್ಲದೇ ಹೆಲಿಕಾಪ್ಟರ್ ತಪಾಸಣೆಯ ವೀಡಿಯೋವನ್ನು ಅಧಿಕಾರಿಗಳು ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು.
ಇತ್ತೀಚೆಗೆ ಕೇರಳದಲ್ಲಿ ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅನ್ನು ಸಹ ತಪಾಸಣೆ ನಡೆಸಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement