ಪ್ರಜ್ವಲ್ ರೇವಣ್ಣ ಪ್ರಕರಣ : ಮಾಜಿ ಶಾಸಕ ಪ್ರೀತಂಗೌಡ ಆಪ್ತರನ್ನು ವಶಕ್ಕೆ ಪಡೆದ ಎಸ್ಐಟಿ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ಅಧಿಕಾರಿಗಳು(ಎಸ್ಐಟಿ) ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂಗೌಡ ಆಪ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಪ್ರೀತಂಗೌಡ ಆಪ್ತರಾದ ಲಿಖಿತ್ ಮತ್ತು ಕಚೇರಿಯ ಸಿಬ್ಬಂದಿ ಚೇತನ ಎಂಬವರನ್ನು ಎಸ್ಐಟಿ ವಶಕ್ಕೆ ಪಡೆದಿದೆ. ಜೊತೆಗೆ ಇತರ ಇಬ್ಬರಿಗಾಗಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತಂಡ ಹಾಸನದಲ್ಲಿ ಹಲವರನ್ನು ವಿಚಾರಣೆಗೆ ಒಳಪಡಿಸಿದೆ. ಈಗ ಮಾಜಿ ಶಾಸಕ ಪ್ರೀತಂಗೌಡ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಈ ಇಬ್ಬರನ್ನು ಪೆನ್ ಡ್ರೈವ್ ಇಟ್ಟುಕೊಂಡಿದ್ದ ಆರೋಪದ ಮೇಲೆ ವಶಕ್ಕೆ ಪಡೆದಿದೆ ಎಂದು ಹೇಳಲಾಗಿದೆ.

4 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ತಾಯಿ ಗದರಿದ ಕೋಪಕ್ಕೆ ಕೆರೆಗೆ ಹಾರಿದ 14 ವರ್ಷದ ಮಗಳು ; ರಕ್ಷಿಸಲು ಹೋದ ತಾಯಿಯೂ ಮುಳುಗಿ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement