ರಾಜ್ಯದ ಈ ಜಿಲ್ಲೆಗಳಲ್ಲಿ 6-7 ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕಾಗಿದ್ದು, ಒಂದು ವಾರದ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮೇ 12ರಿಂದ ಮೇ 16ರ ವರೆಗೆ ಜೋರಾಗಿ ಮಳೆಯಾಗಲಿದೆ. ಮೇ 17 ಮತ್ತು 18ರಂದು ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೇ 13ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.
ಮೇ 12ರಂದು ಉತ್ತರ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮೇ 13 ಮತ್ತು 14ರಂದು ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಒಂದು ವಾರ ಸಾಧಾರಣ ಮಳೆಯಾಗಲಿದೆ. ಮೇ 12ರಂದು ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆ, ಮೇ 13 ಮತ್ತು 14ರಂದು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಹಾಗೂ ಗುಡುಗುನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ಕಾಲ್ತುಳಿತ ಪ್ರಕರಣ | ಐಪಿಎಸ್‌ ಅಧಿಕಾರಿ ವಿಕಾಸಕುಮಾರ ಅಮಾನತು ಆದೇಶ ರದ್ದುಗೊಳಿಸಿದ ಸಿಎಟಿ; ಸರ್ಕಾರಕ್ಕೆ ಹಿನ್ನಡೆ

ರಾಜ್ಯದ ಹಲವೆಡೆ ಮಳೆ…
ಶನಿವಾರ ರಾಜ್ಯದ ಚಾಮರಾಜನಗರ, ದಕ್ಷಿಣ ಕನ್ನಡ, ಹಾಸನ (Hassan), ಹಾವೇರಿ, ಧಾರವಾಡ, ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ (Rain) ಮಳೆಯಾಗಿದೆ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಾದ್ಯಂತ ಶನಿವಾರ ಸಂಜೆ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಭರ್ಜರಿ ಮಳೆಯಾಗಿದೆ. ಸಂಜೆ 3ರ ನಂತರ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಗುಡುಗು ಸಿಡಿಲಿನಿಂದ ಕೂಡಿದ ಉತ್ತಮ ಮಳೆಯಾಗಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು, ಸಿಡಿಲಿನ ಜತೆ ಮಳೆಯಾಗಿದೆ. ಈ ವೇಳೆ ಚಾರ್ಮಾಡಿಯ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಯೂ ನಡೆಯಿತು. ಸಿಡಿಲು ಬಡಿದು ಬೆಂಕಿ ಉಂಟಾಗಿರುವ ಶಂಕೆ ಇದ್ದು, ಉತ್ತಮ ಮಳೆಯಾದ ಕಾರಣ ಅರಣ್ಯ ಭಾಗಕ್ಕೆ ಯಾವುದೇ ಹಾನಿ ಉಂಟಾಗಿಲ್ಲ ಎಂದು ತಿಳಿದು ಬಂದಿದೆ. ಪುತ್ತೂರು ತಾಲೂಕಿನ ಹಲವೆಡೆ ಶನಿವಾರ ಸಂಜೆ ಗುಡುಗು ಸಹಿತ ಮಳೆ ಸುರಿದಿದೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಭಾಗದಲ್ಲಿ ಗುಡುಗು ಮಿಶ್ರಿತ ಮಳೆ ಜೋರಾಗಿ ಸುರಿದಿದೆ.
ಶನಿವಾರ ಮಧ್ಯಾಹ್ನದ ನಂತರ ಹುಬ್ಬಳ್ಳಿ- ಧಾರವಾಡ ಅವಳಿ ನಗರ ಸೇರಿದಂತೆ ಧಾರವಾಡ ಜಿಲ್ಲೆಯ ಹಲವಡೆ ಗುಡುಗು, ಬಿರುಗಾಳಿಯಿಂದ ಕೂಡಿದ ಮಳೆ ಆಗಿದೆ.
ಚಾಮರಾಜನಗರದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದೆ. ಹಾಸನ ಜಿಲ್ಲೆಯ ವಿವಿಧೆಡೆ ಭಾರೀ ಗಾಳಿ, ಗುಡುಗು- ಸಿಡಿಲು ಸಹಿತ ಮಳೆಯಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ ಭಾಗಗಳಲ್ಲಿಯೂ ಮಳೆಯಾಗಿದೆ.

ಪ್ರಮುಖ ಸುದ್ದಿ :-   ಸೋನಿಯಾ ಗಾಂಧಿಗೆ ಸಿದ್ದರಾಮಯ್ಯರನ್ನು ಪರಿಚಯಿಸಿದ್ದೇ ನಾನು, ಲಾಟರಿ ಹೊಡೆದ್ರು ಸಿಎಂ ಆದ್ರು ; ಬಿ.ಆರ್. ಪಾಟೀಲ ಫೋನ್ ಕರೆ ಲೀಕ್‌

5 / 5. 5

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement