ವಿಧಾನ ಪರಿಷತ್ ಚುನಾವಣೆ : ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ; ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್‌

ಉಡುಪಿ : ವಿಧಾನ ಪರಿಷತ್‌ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ತೀರ್ಮಾನಿಸಿದ್ದಾರೆ.
ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಅವರು ಕರಂಬಳ್ಳಿಯ ತಮ್ಮ ನಿವಾಸದಲ್ಲಿ ಮಾಧ್ಯಮದವರಿಗೆ ತಿಳಿಸಿದ್ದಾರೆ. ನಾನು ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧೆ ಮಾಡುತ್ತೇನೆ. ಸೋತರೂ ಬಿಜೆಪಿಯಲ್ಲೇ ಇರುತ್ತೇನೆ, ಗೆದ್ದರೂ ಬಿಜೆಪಿಯಲ್ಲೇ ಇರುತ್ತೇನೆ. ಇದು ಯಾವುದೇ ಬಂಡಾಯ ಅಥವಾ ಪಕ್ಷ, ವ್ಯಕ್ತಿ ವಿರುದ್ಧದ ಸ್ಪರ್ಧೆಯಲ್ಲ. ಜನರ ಸೇವೆ ಮಾಡಲು ಕೆಲಸ ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮುಖಂಡರು ನನಗೆ ಟಿಕೆಟ್‌ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಭರವಸೆ ನೀಡಿದಂತೆ ಟಿಕೆಟ್‌ ನೀಡಲಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ನಿರಾಕರಿಸಿದಾಗಲೂ ನಾನು ಸುಮ್ಮನಿದ್ದೆ. ಆದರೆ ಶಿಕ್ಷಕರ ಸಮುದಾಯ ಮತ್ತು ಪದವೀಧರ ಸಮುದಾಯ ನನಗೆ ಬೆಂಬಲ ನೀಡಿದೆ ಎಂದ ಅವರು ಪಕ್ಷದ ನಿರ್ಧಾರಕ್ಕೆ ಬೇಸರವಿಲ್ಲ. ಆದರೆ ಟಿಕೆಟ್‌ ನೀಡುವುದಾಗಿ ಖಚಿತ ಭರವಸೆ ನೀಡಿ ಈ ನಿರಾಕರಿಸಿರುವುದು ಬೇಸರ ತಂದಿದೆ ಹೀಗಾಗಿ ಪಕ್ಷದ ಸಾಮಾನ್ಯ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದ್ದೇನೆ ಎಂದು ರಘುಪತಿ ಭಟ್ ಹೇಳಿದರು.

ಪ್ರಮುಖ ಸುದ್ದಿ :-   ಮೈಸೂರು: ಮಲಗಿದ್ದ ಸ್ಥಿತಿಯಲ್ಲೇ ಒಂದೇ ಕುಟುಂಬದ ನಾಲ್ವರು ಸಾವು

4 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement