ಅಕ್ರಮ ಹಣ ವರ್ಗಾವಣೆ ಪ್ರಕರಣ : ಜಾರ್ಖಂಡ ಸಚಿವನನ್ನು ಬಂಧಿಸಿದ ಇ.ಡಿ.

ನವದೆಹಲಿ: ಜಾರ್ಖಂಡ್‌ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್‌ ಆಲಂ ಅವರ ಆಪ್ತ ಕಾರ್ಯದರ್ಶಿಗೆ ಸಂಬಂಧಿಸಿದ ಫ್ಲ್ಯಾಟ್‌ನಿಂದ ₹ 35 ಕೋಟಿಗೂ ಅಧಿಕ ನಗದು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಅಲಂಗೀರ್‌ ಆಲಂ ಅವರನ್ನು ಬಂಧಿಸಿದೆ. ಮಂಗಳವಾರ ರಾಂಚಿಯಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಆಲಂ ಅವರನ್ನು ಒಂಬತ್ತು ಗಂಟೆಗಳ ಕಾಲ … Continued

ಕೇರಳಕ್ಕೆ ಮೇ 31ರಂದು ನೈಋತ್ಯ ಮಾನ್ಸೂನ್ ಪ್ರವೇಶ : ವಾಡಿಕೆಗಿಂತ ಹೆಚ್ಚು ಮಳೆ ಸಾಧ್ಯತೆ ; ಹವಾಮಾನ ಇಲಾಖೆ

ನವದೆಹಲಿ : ಬಹುನಿರೀಕ್ಷಿತ ನೈಋತ್ಯ ಮಾನ್ಸೂನ್ ಮೇ 31 ರಂದು ಕೇರಳವನ್ನು ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ ತಿಳಿಸಿದೆ. ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1 ರಂದು ಕೇರಳದಲ್ಲಿ ಪ್ರಾರಂಭವಾಗುತ್ತದೆ. ಭಾರತದ ಕೃಷಿ ಆರ್ಥಿಕತೆಗೆ ನಾಲ್ಕು-ತಿಂಗಳ ನೈಋತ್ವ ಮಾನ್ಸೂನ್‌ ಋತುಮಾನವು ನಿರ್ಣಾಯಕವಾಗಿದೆ, ಇದು ದೇಶದಾದ್ಯಂತ ವಾರ್ಷಿಕ ಮಳೆಯ ಸುಮಾರು 75% ರಷ್ಟನ್ನು … Continued

ಸ್ಲೊವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡಿನ ದಾಳಿ: ಸ್ಥಿತಿ ಗಂಭೀರ

ಹ್ಯಾಂಡ್ಲೊವಾ: ಸ್ಲೊವಾಕಿಯಾದ ಪ್ರಧಾನಿ ರಾಬರ್ಟ್ ಫಿಕೊ (59) ಅವರ ಮೇಲೆ ಬುಧವಾರ ಗುಂಡಿನ ದಾಳಿ ನಡೆದಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅಲ್ಲಿನ ಆಡಳಿತ ಹೇಳಿದೆ. ರಾಜಧಾನಿ ಬ್ರಟಿಸ್ಲಾವಾದಿಂದ ಉತ್ತರಕ್ಕಿರುವ ಹ್ಯಾಂಡ್ಲೊವಾದಲ್ಲಿ ಆಯೋಜನೆಗೊಂಡಿದ್ದ ಸರ್ಕಾರಿ ಸಭೆಯಲ್ಲಿ ಪಾಲ್ಗೊಂಡ ನಂತರ ಹೊರಬರುತ್ತಿದ್ದ ಅವರ ಮೇಲೆ ವ್ಯಕ್ತಿಯೊಬ್ಬ ಹಲವು ಬಾರಿ ಗುಂಡಿನ ದಾಳಿ ನಡೆಸಿದ್ದಾನೆ. ಫಿಕೊ ಅವರ … Continued

ಪೌರತ್ವ (ತಿದ್ದುಪಡಿ) ಕಾಯ್ದೆ ಅಡಿ ಮೊದಲ ಬಾರಿಗೆ 14 ಜನರಿಗೆ ಪೌರತ್ವ ಪ್ರಮಾಣಪತ್ರ ನೀಡಿದ ಕೇಂದ್ರ ಸರ್ಕಾರ

ನವದೆಹಲಿ : ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ದೌರ್ಜನ್ಯಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ರಾಷ್ಟ್ರೀಯತೆಯನ್ನು ನೀಡುವ ಪ್ರಕ್ರಿಯೆಯನ್ನು ಕೇಂದ್ರವು ಪ್ರಾರಂಭಿಸಿದ್ದು, ಇಂದು, ಬುಧವಾರ 14 ಜನರಿಗೆ ಪೌರತ್ವ (ತಿದ್ದುಪಡಿ) ಕಾಯ್ದೆ ಅಥವಾ ಸಿಎಎ ಅಡಿಯಲ್ಲಿ ಮೊದಲ ಸೆಟ್ ಪೌರತ್ವ ಪ್ರಮಾಣಪತ್ರಗಳನ್ನು ನೀಡಲಾಗಿದೆ. ಸಿಎಎ ಅಡಿಯಲ್ಲಿ, ಡಿಸೆಂಬರ್ 31, 2014 ರ ಮೊದಲು ಭಾರತಕ್ಕೆ ಬಂದ ಪಾಕಿಸ್ತಾನ, … Continued

ವೀಡಿಯೊ..| ಬೀದರ : ಬಸ್‌ ಸೀಟಿಗಾಗಿ ಬಟ್ಟೆ ಎಳೆದಾಡಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು…!

ಬಸ್ ಸೀಟಿಗಾಗಿ ಇಬ್ಬರು ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡ ಘಟನೆ ಬೀದರ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಪ್ಪಲಿಯಿಂದ ಹೊಡೆದಾಡಿಕೊಂಡ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಬೀದರಿನಿಂದ ಕಲಬುರಗಿಗೆ ಹೋಗುವ ಬಸ್ಸಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಸರ್ಕಾರದ ಶಕ್ತಿ ಯೋಜನೆ ಅಡಿ ಉಚಿತ ಟಿಕೆಟ್ ಪಡೆದಿದ್ದ ಇಬ್ಬರು ಮಹಿಳೆಯರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಬಸ್‌ … Continued

“ಬಂಧನ ಅನೂರ್ಜಿತ” : ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪುರಕಾಯಸ್ಥ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ : ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (ಯುಎಪಿಎ) ಅಡಿ ನ್ಯೂಸ್‌ಕ್ಲಿಕ್‌ ಸುದ್ದಿ ಜಾಲತಾಣದ ಪ್ರಧಾನ ಸಂಪಾದಕ ಪ್ರಬೀರ ಪುರಕಾಯಸ್ಥ ಅವರ ಬಂಧನವನ್ನು ಸುಪ್ರೀಂಕೋರ್ಟ್‌ ಬುಧವಾರ ರದ್ದುಗೊಳಿಸಿದೆ. ಪುರಕಾಯಸ್ಥ ಅವರಿಂದ ಶ್ಯೂರಿಟಿ ಮತ್ತು ಜಾಮೀನು ಬಾಂಡ್ ಪಡೆದು ಬಿಡುಗಡೆ ಮಾಡುವಂತೆ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸಂದೀಪ ಮೆಹ್ತಾ ಅವರಿದ್ದ ಪೀಠ ಆದೇಶಿಸಿದೆ. ರಿಮಾಂಡ್ ಅರ್ಜಿಯ … Continued

ಬಿಜೆಪಿ 300ರ ಆಸುಪಾಸು ಸ್ಥಾನ ಪಡೆಯಬಹದು; ಬಿಜೆಪಿ ಸಂಖ್ಯೆ ಕುಸಿಯುವ ಗ್ರೌಂಡ್ ರಿಯಾಲಿಟಿ ನನಗೆ ಕಾಣುತ್ತಿಲ್ಲ : ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ

ನವದೆಹಲಿ :  ರಾಜಕೀಯ ವಿಶ್ಲೇಷಕ ಪ್ರಶಾಂತ ಕಿಶೋರ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಭಾರತೀಯ ಜನತಾ ಪಕ್ಷವು 2024 ರ ಲೋಕಸಭಾ ಚುನಾವಣೆಯಲ್ಲಿ 300ರ ಆಸುಪಾಸು ಸೀಟುಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಥಾನ ಗೆಲ್ಲುವುದರಲ್ಲಿ ಯಾವುದೇ ಅರ್ಥಪೂರ್ಣ ಕುಸಿತದ ಸಾಧ್ಯತೆಯಿಲ್ಲ ಎಂದು ಅವರು ಹೇಳಿದ್ದಾರೆ. “ಎಲ್ಲ ಟೀಕೆಗಳು ಮತ್ತು ಚರ್ಚೆಗಳ ನಂತರ, ಭಾರತದ … Continued

ಲೋಕಸಭಾ ಚುನಾವಣೆ ಬಳಿಕ ಮೊಬೈಲ್ ರೀಚಾರ್ಜ್ ಬೆಲೆಯಲ್ಲಿ ಶೇ.25 ಹೆಚ್ಚಳ ಸಾಧ್ಯತೆ

ನವದೆಹಲಿ : ಲೋಕಸಭಾ ಚುನಾವಣೆಯ ನಂತರ ಮೊಬೈಲ್ ಟೆಲಿಕಾಂ ಕಂಪನಿಗಳು ಶುಲ್ಕವನ್ನು ಶೇ.25ರಷ್ಟು ಹೆಚ್ಚಿಸಲು ಯೋಜಿಸುತ್ತಿವೆ ಎಂದು ವರದಿಯಾಗಿದೆ. ಬ್ರೋಕರೇಜ್ ಸಂಸ್ಥೆ ಆಕ್ಸಿಸ್ ಕ್ಯಾಪಿಟಲ್‌ನ ಇತ್ತೀಚಿನ ವರದಿಯು, ಟೆಲಿಕಾಂ ಕಂಪನಿಗಳು ಮತ್ತೊಂದು ಸುತ್ತಿನ ಶುಲ್ಕ ಹೆಚ್ಚಳಕ್ಕೆ ಯೋಜಿಸುತ್ತಿದ್ದು, ಭಾರತದಲ್ಲಿನ ಮೊಬೈಲ್ ಫೋನ್ ಬಳಕೆದಾರರು ಶೀಘ್ರದಲ್ಲೇ ತಮ್ಮ ಬಿಲ್‌ಗಳಲ್ಲಿ ಹೆಚ್ಚಳ ಕಾಣಬಹುದು ಎಂದು ಹೇಳಿದೆ. ಬೆಲೆಗಳಲ್ಲಿನ ಈ … Continued

ಪ್ರೀತಿಸಲು ನಿರಾಕರಣೆ ; ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಮಾದರಿಯಲ್ಲೇ ಮತ್ತೊಂದು ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ನೇಹಾ ಹಿರೇಮಠ ಕೊಲೆಯ ಕಹಿ ನೆನಪಿನಿಂದ ಹೊರಬರುವ ಮೊದಲೇ ಹುಬ್ಬಳ್ಳಿ(Hubballi)ಯಲ್ಲಿ ಅಂತಹದ್ದೇ ಮತ್ತೊಂದು ಘಟನೆ ಬಧುವಾರ (ಮೇ 15) ಬೆಳ್ಳಂಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ತನ್ನ ಪ್ರೀತಿ ನಿರಾಕರಿದ ಕಾರಣಕ್ಕೆ ಪಾಗಲ್ ಪ್ರೇಮಿಯೊಬ್ಬ ಯುವತಿಯ ಬೆಳಂಬೆಳಿಗ್ಗೆ ಯುವತಿಯ ಮನೆಗೆ ನುಗ್ಗಿ ಮನಬಂದಂತೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ನಗರದ ವೀರಾಪುರ ಓಣಿ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರದ ವರೆಗೆ ಜೋರಾಗಿ ಮಳೆ : ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಸುಮಾರು 10 ಜಿಲ್ಲೆಗಳಲ್ಲಿ ಇಂದಿನಿಂದ (ಮೇ 15) ಒಂದು ವಾರ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಾಮರಾಜನಗರ, ಹಾಸನ, ಕೊಡಗು,ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಜೋರಾಗಿ ಮಳೆಯಾಗಲಿದೆ. ಮಳೆಯ … Continued