ಅಕ್ರಮ ಹಣ ವರ್ಗಾವಣೆ ಪ್ರಕರಣ : ಜಾರ್ಖಂಡ ಸಚಿವನನ್ನು ಬಂಧಿಸಿದ ಇ.ಡಿ.

ನವದೆಹಲಿ: ಜಾರ್ಖಂಡ್‌ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್‌ ಆಲಂ ಅವರ ಆಪ್ತ ಕಾರ್ಯದರ್ಶಿಗೆ ಸಂಬಂಧಿಸಿದ ಫ್ಲ್ಯಾಟ್‌ನಿಂದ ₹ 35 ಕೋಟಿಗೂ ಅಧಿಕ ನಗದು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಅಲಂಗೀರ್‌ ಆಲಂ ಅವರನ್ನು ಬಂಧಿಸಿದೆ.
ಮಂಗಳವಾರ ರಾಂಚಿಯಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಆಲಂ ಅವರನ್ನು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು ಮತ್ತು ಬುಧವಾರ ಅವರನ್ನು ಮತ್ತೆ ಅವರನ್ನು ವಿಚಾರಣೆಗೆ ಕರೆಯಲಾಯಿತು. ಆರು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದ್ದು, ತನಿಖೆಗೆ ಸಹಕರಿಸದ ಕಾರಣ ಅವರನ್ನು ಬಂಧಿಸಲಾಗಿದೆ ಎಂದು ಇ.ಡಿ. ಮೂಲಗಳು ತಿಳಿಸಿವೆ.

ಕಳೆದ ವಾರ ರಾಂಚಿಯಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಸಂಜೀವ ಲಾಲ ಅವರ ಮನೆಯ ಸಹಾಯಕರಾದ ಜಹಾಂಗೀರ್ ಆಲಂ ವಾಸವಾಗಿದ್ದ 2BHK ಫ್ಲಾಟ್ ಮೇಲೆ ದಾಳಿ ನಡೆಸಿದಾಗ ಅಲ್ಲಿ ₹ 35.23 ಕೋಟಿ ಹಣ ಹಾಗೂ ಇತರ ನಿವೇಶನಗಳಿಂದ ₹ 1.5 ಕೋಟಿಗೂ ಅಧಿಕ ಹಣವನ್ನು ಜಪ್ತಿ ಮಾಡಲಾಗಿತ್ತು. ಒಟ್ಟು ₹ 37 ಕೋಟಿ ಹಣವನ್ನುವಶಪಡಿಸಿಕೊಳ್ಳಲಾಗಿದೆ. ಲಾಲ ಮತ್ತು ಜಹಾಂಗೀರ್ ಆಲಂ ಅವರನ್ನು ಮರುದಿನ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಬಂಧಿಸಲಾಯಿತು ಮತ್ತು ಪ್ರಸ್ತುತ ಅವರು ಇ.ಡಿ. ವಶದಲ್ಲಿದ್ದಾರೆ.

ಪ್ರಮುಖ ಸುದ್ದಿ :-   ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ : ಸ್ವಾತಿ ಮಲಿವಾಲ್ ಹೊಸ ವೀಡಿಯೊ ಬಿಡುಗಡೆ ಮಾಡಿದ ಎಎಪಿ : ನಿಜವಾಗಿ ನಡೆದದ್ದು ಏನು..?

ಆಲಂ ಮತ್ತು ಅವರ ಸಹಾಯಕರ ವಿರುದ್ಧದ ಪ್ರಕರಣವು ಜಾರ್ಖಂಡ್ ಟೆಂಡರ್ ಹಗರಣಕ್ಕೆ ಸಂಬಂಧಿಸಿದೆ.
70 ವರ್ಷ ವಯಸ್ಸಿನ ಕಾಂಗ್ರೆಸ್ ನಾಯಕ 2000 ರಲ್ಲಿ ಜಾರ್ಖಂಡ್ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾದರು ಮತ್ತು ಅದರ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಹೇಮಂತ್ ಸೊರೆನ್ ಅವರನ್ನು ಇ.ಡಿ. ವಶಕ್ಕೆ ತೆಗೆದುಕೊಂಡ ತಿಂಗಳ ನಂತರ ಅವರ ಬಂಧನವಾಗಿದೆ. ಸೋರೆನ್ ಅವರನ್ನು ಅಧಿಕೃತವಾಗಿ ಬಂಧಿಸುವ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement