ಪ್ರೀತಿಸಲು ನಿರಾಕರಣೆ ; ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಮಾದರಿಯಲ್ಲೇ ಮತ್ತೊಂದು ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ನೇಹಾ ಹಿರೇಮಠ ಕೊಲೆಯ ಕಹಿ ನೆನಪಿನಿಂದ ಹೊರಬರುವ ಮೊದಲೇ ಹುಬ್ಬಳ್ಳಿ(Hubballi)ಯಲ್ಲಿ ಅಂತಹದ್ದೇ ಮತ್ತೊಂದು ಘಟನೆ ಬಧುವಾರ (ಮೇ 15) ಬೆಳ್ಳಂಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ.
ತನ್ನ ಪ್ರೀತಿ ನಿರಾಕರಿದ ಕಾರಣಕ್ಕೆ ಪಾಗಲ್ ಪ್ರೇಮಿಯೊಬ್ಬ ಯುವತಿಯ ಬೆಳಂಬೆಳಿಗ್ಗೆ ಯುವತಿಯ ಮನೆಗೆ ನುಗ್ಗಿ ಮನಬಂದಂತೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ನಗರದ ವೀರಾಪುರ ಓಣಿ ಕರಿಯಮ್ಮನ ಗುಡಿ ಬಳಿ ಬುಧವಾರ ಬೆಳಗಿನ ಜಾವ ನಡೆದಿದೆ ಎಂದು ವರದಿಯಾಗಿದೆ.
ವೀರಾಪುರ ಓಣಿಯ ಅಂಜಲಿ ಮೋಹನ ಅಂಬಿಗೇರ (29) ಎಂಬ ಯುವತಿಯನ್ನು ಮನೆಗೆ ನುಗ್ಗಿ ಕೊಲೆ ಮಾಡಲಾಗಿದೆ. ಕೊಲೆ ಆರೋಪಿಯನ್ನು ಯಲ್ಲಾಪುರ ಓಣಿಯ ಗಿರೀಶ (ವಿಶ್ವ)  ಎಂದು ಗುರುತಿಸಲಾಗಿದ್ದು, ಆತ ಆಟೋ ಚಾಲಕ ಎಂದು ಹೇಳಲಾಗಿದೆ. ಆತ ಕೊಲೆ ಮಾಡಿದ ನಂತರ ಅಲ್ಲಿಂದ ಪರಾರಿಯಾಗಿದ್ದಾನೆ. ಕೊಲೆ ಮಾಡಿದ ಯುವಕ ಆಕೆಯನ್ನು ನೇಹಾ ಕೊಲೆಯಾದ ಮಾದರಿಯಲ್ಲಿಯೇ ಸಾಯಿಸುವೆ ಎಂದು ಎಚ್ಚರಿಸಿದ್ದ ಎಂಬ ಮಾಹಿತಿ ಹೊರಬಿದ್ದಿದೆ.

ಯುವತಿ ತನ್ನ ಪ್ರೀತಿ ನಿರಾಕರಿಸಿದ್ದಕ್ಕೆ ಗಿರೀಶ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಮನೆಯ ಬಾಗಿಲು ಬಡೆದಿದ್ದಾನೆ. ಆಗ ಯುವತಿ ಬಾಗಿಲು ತೆರೆದಾಗ ಒಳಗೆ ನುಗ್ಗಿದ ಆತ ಮನೆಯವರ ಎದುರೇ ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಅಂಜಲಿಯ ಕುತ್ತಿಗೆ ಹಾಗೂ ಹೊಟ್ಟೆಯ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾನೆ, ಮನೆ ತುಂಬೆಲ್ಲಾ ಎಳೆದಾಡಿ ಚಾಕುವಿನಿಂದ ಚುಚ್ಚಿದ್ದಾನೆ. ಬಳಿಕ ಪರಾರಿಯಾಗಿದ್ದಾನೆ ಎನ್ನಲಾಗಿದೆ. ತೀವ್ರ ರಕ್ತಸ್ರಾವದಿಂದ ಯುವತಿ ಅಂಜಲಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ ಎಂದು ಹೇಳಲಾಗಿದೆ.
ಆರೋಪಿ ತನ್ನನ್ನು ಪ್ರೀತಿಸುವಂತೆ ಹಲವು ದಿನಗಳಿಂದ ಯುವತಿಯನ್ನು ಪೀಡಿಸುತ್ತಿದ್ದ ಆದರೆ, ಯುವತಿ ನಿರಾಕರಿಸಿದ್ದಳು ಎನ್ನಲಾಗಿದೆ.  ಬೆಂಡಿಗೇರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಪೊಲೀಸರು ಆರೋಪಿ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಬಿಜೆಪಿ ಶಾಸಕ ಹರೀಶ ಪೂಂಜಾ ವಿರುದ್ದ ಮತ್ತೊಂದು ಎಫ್ಐಆರ್

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement