ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲು

ಹಾಸನ: ಹೊಳೆಗೆ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ.
ಮೃತ ಬಾಲಕರನ್ನು ಜೀವನ್(13), ಸಾತ್ವಿಕ್(11), ವಿಶ್ವ(12), ಪೃಥ್ವಿ(12) ಎಂದು ಗುರುತಿಸಲಾಗಿದೆ. ಐವರು ಗೆಳೆಯರು ಹೊಳೆಗೆ ಈಜಲು ಹೋಗಿದ್ದರು. ಹೊಳೆಗೆ ಇಳಿದಾಗ ನೀರಿನಿಂದ ಹೊರಬರಲಾಗದೆ ನಾಲ್ವರು ಮುಳುಗಿದ್ದಾರೆ. ಮತ್ತೊಬ್ಬ ಬಾಲಕ ಪಾರಾಗಿದ್ದಾನೆ.
ಬದುಕುಳಿದ ಓರ್ವ ಬಾಲಕ ಓಡಿ ಹೋಗಿ ಸಮೀಪದಲ್ಲಿದ್ದವರಿಗೆ ಮಾಹಿತಿ ನೀಡಿದ್ದಾನೆ. ಆದರೆ ಅವರು ಬಂದು ನೋಡುವಷ್ಟರಲ್ಲಿ ನಾಲ್ವರು ಬಾಲಕರು ನೀರು ಪಾಲಾಗಿದ್ದರು.
ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ನೀರಲ್ಲಿ ಕೊಚ್ಚಿ ಹೋಗಿರುವ ಮೃತದೇಹಕ್ಕಾಗಿ ಅಗ್ನಿಶಾಮಕದಳದ ಸಿಬ್ಬಂದಿಯಿಂದ ಶೋಧಕಾರ್ಯ ಮುಂದುವರಿದಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸೋನಿಯಾ ಗಾಂಧಿಗೆ ಸಿದ್ದರಾಮಯ್ಯರನ್ನು ಪರಿಚಯಿಸಿದ್ದೇ ನಾನು, ಲಾಟರಿ ಹೊಡೆದ್ರು ಸಿಎಂ ಆದ್ರು ; ಬಿ.ಆರ್. ಪಾಟೀಲ ಫೋನ್ ಕರೆ ಲೀಕ್‌

ನಿಮ್ಮ ಕಾಮೆಂಟ್ ಬರೆಯಿರಿ

advertisement