ಎಎಪಿ ನಾಯಕಿ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ವಿವಾದ ; ಮಲಿವಾಲ್‌ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ, ಪ್ರಶ್ನೆಗೆ ಉತ್ತರಿಸದೆ ಮೈಕ್‌ ಮತ್ತೊಬ್ಬರಿಗೆ ಕೊಟ್ಟ ಕೇಜ್ರಿವಾಲ್

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ವಿಭವಕುಮಾರ ಹಲ್ಲೆ ಮಾಡಿದ ಆರೋಪಿತ ಘಟನೆಯ ಬಗ್ಗೆ ವಿವಿಧ ರಾಜಕೀಯ ಪಕ್ಷಗಳು ಪ್ರತಿಕ್ರಿಯಿಸುತ್ತಿದ್ದು, ಇದು ರಾಜಕೀಯ ವಿವಾದಕ್ಕೆ ಕಾರಣವಾಗಿದೆ.
ಎಎಪಿ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಈ ವಿಷಯದ ಬಗ್ಗೆ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದೆ ನುಣುಚಿಕೊಂಡರೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಈ ಪ್ರಕರಣದಲ್ಲಿ ತಾನು ಸ್ವಾತಿ ಮಲಿವಾಲ್ ಅವರ ಪರವಾಗಿ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.
ಯಾವುದೇ ಮಹಿಳೆಗೆ ಎಲ್ಲಿಯಾದರೂ ದೌರ್ಜನ್ಯ ನಡೆದರೆ, ನಾವು ಮಹಿಳೆಯೊಂದಿಗೆ ನಿಲ್ಲುತ್ತೇವೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದರು. ‌ ಮಹಿಳೆ ಯಾವುದೇ ಪಕ್ಷದಲ್ಲಿದ್ದರೂ ನಾನು ಮಹಿಳೆಯರೊಂದಿಗೆ ಸದಾ ನಿಲ್ಲುತ್ತೇನೆ. ಅಲ್ಲದೆ, ಎಎಪಿ ಈ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತದೆ. ಅದು ಅವರಿಗೆ ಬಿಟ್ಟದ್ದು ಎಂದು ಅವರು ಹೇಳಿದ್ದಾರೆ.

ಗುರುವಾರ, ಎಎಪಿ ಟ್ರ್ಯಾಕ್ ಬದಲಾಯಿಸಿದೆ ಮತ್ತು ಇದು “ಎಎಪಿ ಕುಟುಂಬ”ದ ವಿಷಯ ಮತ್ತು ಈ “ವಿಷಯವನ್ನು ರಾಜಕೀಯಗೊಳಿಸಬೇಡಿ” ಎಂಬಂತಹ ಹೇಳಿಕೆಗಳನ್ನು ಬಳಸಿಕೊಂಡು ವಿವಾದವನ್ನು ಕಡಿಮೆ ಮಾಡಲು ಪ್ರಯತ್ನಿಸಿತು. ವಾಸ್ತವವಾಗಿ, ಅದು ಬಿಜೆಪಿಯ ಮೇಲೆ ಟೇಬಲ್ ತಿರುಗಿಸಲು ಪ್ರಯತ್ನಿಸಿತು.
ಕೇಜ್ರಿವಾಲ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ, ಸುದ್ದಿಗಾರರು ಈ ವಿವಾದದ ಬಗ್ಗೆ ಪ್ರಶ್ನೆ ಕೇಳಿದಾಗ ಅರವಿಂದ ಕೇಜ್ರವಾಲ್‌ ಯಾವುದೇ ಉತ್ತರ ನೀಡದೆ ಸಂಜಯ್ ಸಿಂಗ್‌ಗೆ ಮೈಕ್ ರವಾನಿಸಿದರು. ಅಖಿಲೇಶ ಯಾದವ್, “ಇದಕ್ಕಿಂತ ಹೆಚ್ಚಿನ ವಿಷಯಗಳಿವೆ” ಎಂದರು.

ಪ್ರಮುಖ ಸುದ್ದಿ :-   ಪವಿತ್ರಾ ಜಯರಾಮ ಸಾವಿನ ಬೆನ್ನಲ್ಲೇ ಗೆಳೆಯ-ಕಿರುತೆರೆ ನಟ ಚಂದು ಆತ್ಮಹತ್ಯೆ

ಸಂಜಯ ಸಿಂಗ್‌ ಅವರು, ಬಿಜೆಪಿಯದ್ದು ಸುಳ್ಳು ಕೇಸ್ ಹಾಕುವ ಗ್ಯಾಂಗ್ ಎಂದು ಟೀಕಿಸಿದರು.”ಕಾರ್ಗಿಲ್ ಯೋಧನ ಪತ್ನಿಯನ್ನು ಬೆತ್ತಲೆಯಾಗಿ ಪರೇಡ್ ಮಾಡಿದಾಗ, ಪ್ರಧಾನಿ ಮೌನವಾಗಿದ್ದರು. ಇದರಿಂದ ಇಡೀ ದೇಶವೇ ದುಃಖಿತವಾಗಿದೆ ಎಂದರು.
ಸೋಮವಾರ ಅರವಿಂದ ಕೇಜ್ರಿವಾಲ್ ಅವರ ಆಪ್ತರಿಂದ ಮಲಿವಾಲ್ ಹಲ್ಲೆ ನಡೆದಿದೆ ಎಂಬ ಆರೋಪದ ನಂತರ, ಹಿರಿಯ ಎಎಪಿ ನಾಯಕ ಸಂಜಯ ಸಿಂಗ್ ಅವರು ಮಂಗಳವಾರ ವಿಭವಕುಮಾರ ಅವರು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಸಿವಿಲ್ ಲೈನ್ಸ್ ನಿವಾಸದಲ್ಲಿ ಸ್ವಾತಿ ಮಲಿವಾಲ್‌ ಅವರ ಮೇಲೆ ಹಲ್ಲೆ ನಡೆಸಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಒಪ್ಪಿಕೊಂಡರು ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು.
ಏತನ್ಮಧ್ಯೆ, ಘಟನೆಯಲ್ಲಿ ಎಎಪಿ ವರಿಷ್ಠರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಕೇಜ್ರಿವಾಲ್ ಮತ್ತು ಅವರ ಸಹಾಯಕ ವಿಭವಕುಮಾರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಆಗ್ರಹಿಸಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಚುನಾವಣಾ ಆಯೋಗದಿಂದ 8,889 ಕೋಟಿ ರೂ.ಮೌಲ್ಯದ ವಸ್ತುಗಳ ವಶ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement