ಬೆಳಗಾವಿ : ಟಿಕೆಟ್ ತೋರಿಸಿ ಎಂದು ಕೇಳಿದ್ದಕ್ಕೆ ಟಿಸಿ ಸೇರಿ ಐವರ ಮೇಲೆ ಮುಸುಕುಧಾರಿಯೊಬ್ಬ ಚಾಕುವಿನಿಂದ ದಾಳಿ ನಡೆಸಿದ ಘಟನೆ ಬೆಳಗಾವಿಯ ಖಾನಾಪುರ ತಾಲೂಕಿನ ಲೋಂಡಾ ಬಳಿ ನಡೆದಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಮತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಪಾಂಡಿಚೇರಿ-ಮುಂಬೈ ಚಾಲುಕ್ಯ ಎಕ್ಸ್‌ಪ್ರೆಸ್ ರೈಲಿನಲ್ಲಿ ಖಾನಾಪುರ ತಾಲೂಕಿನ ಲೋಂಡಾ ಬಳಿ ಈ ಘಟನೆ ನಡೆದಿದೆ. ಚಾಲುಕ್ಯ ಎಕ್ಸ್‌ಪ್ರೆಸ್ ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಅಪರಿಚಿತ ಮುಸುಕುಧಾರಿ ನಾಲ್ವರು ಟಿಕೆಟ್ ಕಲೆಕ್ಟರ್ ಸೇರಿದಂತೆ ಐವರ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಬಳಿಕ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಟಿಸಿ ಸೇರಿ ನಾಲ್ವರು ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಓರ್ವ ಗಾಯಾಳು ಮೃತಪಟ್ಟಿದ್ದಾರೆ. ಮೃತರನ್ನು ಟ್ರೇನ್ ಅಟೆಂಡರ್ ದೇವಋಷಿ (23) ಎಂದು ಗುರುತಿಸಲಾಗಿದೆ. ಉಳಿದ ನಾಲ್ವರಿಗೆ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಬೆಳಗಾವಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ