ಬೆಳಗಾವಿ: ಹಾಡಹಗಲೇ ಸ್ಕ್ರೂ ಡ್ರೈವರ್‌ನಿಂದ ಚುಚ್ಚಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿಯ ಮಹಾಂತೇಶ ನಗರದ ಬ್ರಿಡ್ಜ್ ಬಳಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ.
ಮೃತ ಯುವಕನನ್ನು ಬೆಳಗಾವಿ ಗಾಂಧಿ ನಗರ ನಿವಾಸಿ ಇಬ್ರಾಹಿಂ ಗೌಸ್ (22) ಎಂದು ಗುರುತಿಸಲಾಗಿದೆ. ಕೊಲೆಯಾದ ವ್ಯಕ್ತಿ ಯುವತಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಹೊರಟಾಗ ಯುವತಿ ಸಹೋದರ ಇದನ್ನು ಗಮನಿಸಿ ಯುವಕನ ಮೇಲೆ ಸ್ಕ್ರೂ ಡ್ರೈವರ್‌ನಿಂದ ಚುಚ್ಚಿ ಗಾಯಗೊಳಿಸಿದ್ದ. ತೀವ್ರವಾಗಿ ಗಾಯಗೊಂಡಿದ್ದ ಇಬ್ರಾಹಿಂನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಇಬ್ರಾಹಿಂ ಕೊನೆಯುಸಿರೆಳೆದಿದ್ದಾನೆ ಎಂದು ಹೇಳಲಾಗಿದೆ. ಮುಜಾಮಿಲ್ ಎಂಬಾತ ಈ ಕೃತ್ಯ ನಡೆಸಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಳ ಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ