ಹುಬ್ಬಳ್ಳಿ: ಇಲ್ಲಿನ ವೀರಾಪುರ ಓಣಿಯ ಅಂಜಲಿ ಯುವತಿಯ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ತಲೆದಂಡವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಬೆಂಡಿಗೇರಿ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಚಂದ್ರಶೇಖರ ಚಿಕ್ಕೋಡಿ ಹಾಗೂ ಠಾಣೆಯ ಮುಖ್ಯಪೇದೆ ರೇಖಾ ಅವರನ್ನ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ಅಮಾನತುಗೊಳಿಸಿದ್ದಾರೆ.
ಮೃತ ಯುವತಿ ಅಂಜಲಿ ಹತ್ಯೆಗೂ ಮುನ್ನ ಆರೋಪಿ ವಿಶ್ವ ಎಂಬಾತನಿಂದ ಜೀವ ಬೆದರಿಕೆ ಇರುವುದಾಗಿ ಅಂಜಲಿ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಆದರೂ ಪೊಲೀಸರು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳನ್ನ ಅಮಾನತು ಮಾಡಲಾಗಿದೆ ಎನ್ನಲಾಗಿದೆ.
ಅಂಜಲಿ ಹತ್ಯೆ ಪ್ರಕರಣ…
ನೇಹಾ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಲಿ (20 ವರ್ಷ) ಎಂಬ ಯುವತಿಯನ್ನು ವಿಶ್ವ ಅಲಿಯಾಸ್ ಗಿರೀಶ ಎಂಬ ಯುವಕ ಭೀಕರವಾಗಿ ಹತ್ಯೆ ಮಾಡಿದ್ದ. ಬೆಳಗಿನ ಜಾವ ಬಂದು ಮನೆಯ ಬಾಗಿಲು ಬಡದಿದ್ದ, ಅಂಜಲಿ ಬಾಗಿಲು ತೆಗೆಯುತ್ತಿದ್ದಂತೆಯೇ ಆಕೆಗೆ ಮನಬಂದಂತೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ.
ನಿಮ್ಮ ಕಾಮೆಂಟ್ ಬರೆಯಿರಿ