ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ತಲೆದಂಡ

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ‌ ಕಾಪಾಡುವಲ್ಲಿ ಲೋಪವಾದ ಆರೋಪದ ಮೇರೆಗೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ ಅವರನ್ನು ಅಮಾನತು ಮಾಡಲಾಗಿದೆ.
ನೇಹಾ ಹಿರೇಮಠ ಕೊಲೆ ಬೆನ್ನಲ್ಲೇ ನಡೆದ ಅಂಜಲಿ ಹತ್ಯೆ ಪ್ರಕರಣ (Anjali Murder Case) ಅವಳಿ ನಗರದ ಜನರನ್ನು ಬೆಚ್ಚಿ ಬೀಳಿಸಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಅಂಜಲಿ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್ ಚಂದ್ರಶೇಖರ ಚಿಕ್ಕೋಡಿ, ಹೆಡ್​ಕಾನ್ಸ್​ಟೇಬಲ್ ರೇಖಾ ಅವರನ್ನು ಹು-ಧಾ ಆಯುಕ್ತರು ಅಮಾನತು ಮಾಡಿದ್ದರು. ಈಗ ಹಿರಿಯ ಅಧಿಕಾರಿಯಾದ ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ ಅವರನ್ನೂ ಅಮಾನತುಮಾಡಲಾಗಿದೆ.ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಆ ಮೂಲಕ ಅಂಜಲಿ‌ ಹತ್ಯೆ ಪ್ರಕರಣದಲ್ಲಿ ಮೂವರು ಅಧಿಕಾರಿಗಳ ಅಮಾನತು ಮಾಡಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಯಲ್ಲಾಪುರ | ಅರೆಬೈಲ್‌ ಘಟ್ಟದ ಪ್ರಪಾತದ ಬಳಿ ಖಾಸಗಿ ಬಸ್ ಪಲ್ಟಿ

ನಿಮ್ಮ ಕಾಮೆಂಟ್ ಬರೆಯಿರಿ

advertisement