ಕುಮಟಾ : ತದಡಿ ಬಳಿ ಪ್ರವಾಸಿಗರ ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ ; 40 ಜನರ ರಕ್ಷಣೆ

ಕಾರವಾರ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಪ್ರವಾಸಿಗರ ಬೋಟ್ ಪಲ್ಟಿಯಾಗಿ ನೀರುಪಾಲಾಗುತಿದ್ದ 40 ಪ್ರವಾಸಿಗರನ್ನು ಕರಾವಳಿ ಕಾವಲು ಪಡೆ ಹಾಗೂ ಸ್ಥಳೀಯ ರಕ್ಷಣಾ ತಂಡ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ (Kumata) ತಾಲೂಕಿನ ತದಡಿ ಗ್ರಾಮದ ಸಮೀಪ ಭಾನುವಾರ ನಡೆದಿದೆ ಎಂದು ವರದಿಯಾಗಿದೆ.
ಪ್ರವಾಸಿ ಬೋಟ್ ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಪ್ರಯಾಣಿಸಿದ್ದಕ್ಕೆ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ತದಡಿ ಬಳಿಯ  ಮೂಡಂಗಿಯ  ಸಮುದ್ರದ ಹಿನ್ನೀರಿನಲ್ಲಿ ಮಿತಿಗಿಂತ ಹೆಚ್ಚಿನ ಜನರನ್ನು ದೋಣಿಯಲ್ಲಿರಿಸಿ ಕರೆದೊಯ್ದ ಕಾರಣ ಬೋಟ್ ಮಗುಚಿದ್ದು, ಅದೃಷ್ಟವಶಾತ್ ಬೋಟ್‌ನಲ್ಲಿದ್ದ ಪ್ರವಾಸಿಗರು ಲೈಫ್ ಜಾಕೆಟ್ (Life Jacket) ಧರಿಸಿದ್ದರು. ಅಲ್ಲದೆ, ತಕ್ಷಣವೇ ಕರಾವಳಿ ಕಾವಲು ಪಡೆ ಹಾಗೂ ಸ್ಥಳೀಯ ರಕ್ಷಣಾ ತಂಡದವರು ನೆರವಿಗೆ ಧಾವಿಸಿ 40 ಪ್ರವಾಸಿಗರನ್ನು ರಕ್ಷಣೆ ಮಾಡಿದ್ದಾರೆ. ಆದರೆ ಪ್ರವಾಸಿಗರ   ಬಳಿ ಇದ್ದ ಮೊಬೈಲ್ ,ಬ್ಯಾಗು ಇನ್ನಿತರ ವಸ್ತುಗಳು ನೀರಿನಲ್ಲಿ ಬಿದ್ದು ಹಾನಿಯಾಗಿದೆ. ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement