ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದ ಪೊಲೀಸರು

ನವದೆಹಲಿ: ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡ ಭಾನುವಾರ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿವೆ ಎಂದು ಮೂಲಗಳು ತಿಳಿಸಿವೆ.
ಮೇ 13ರಂದು ಕೇಜ್ರಿವಾಲ್ ಅವರ ಆಪ್ತ ಸಹಾಯಕ ವಿಭವಕುಮಾರ ಅವರು ದೆಹಲಿ ಸಿಎಂ ನಿವಾಸದಲ್ಲಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಿಸಲಾಗಿದೆ.

ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ದೃಶ್ಯಾವಳಿಗಳನ್ನು ಪಡೆಯಲು ಪೊಲೀಸರ ತಂಡ ಸಿಸಿಟಿವಿ ಡಿವಿಆರ್ (ಡಿಜಿಟಲ್ ವಿಡಿಯೊ ರೆಕಾರ್ಡರ್ ) ಸೇರಿದಂತೆ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಕ್ಕೆ ಪಡೆದಿದೆ.
ಸಿಎಂ ನಿವಾಸದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ತಿರುಚಲಾಗಿದೆ ಎಂದು ಮಲಿವಾಲ್ ಆರೋಪಿಸಿದ್ದಾರೆ. ಹಲ್ಲೆ ಪ್ರಜರಣದ ಸಂಬಂಧ ವಿಭವಕುಮಾರ ಅವರನ್ನು ಶನಿವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುದ ನಂತರ ನ್ಯಾಯಾಲಯ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಪೊಲೀಸ್ ಕಸ್ಟಡಿಯ ಅವಧಿಯಲ್ಲಿ ಪತ್ನಿ ಹಾಗೂ ತಮ್ಮ ವಕೀಲರನ್ನು ಪ್ರತಿ ದಿನ 30 ನಿಷಮಿಗಳ ಕಾಲ ಭೇಟಿ ಮಾಡಲು ಅವಕಾಶ ನೀಡಿದೆ.

ಪ್ರಮುಖ ಸುದ್ದಿ :-   ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿ ಅದನ್ನೇ ನಿಗ್ರಹಿಸಿದ ಯುವಕ..! ದೃಶ್ಯ ವೀಡಿಯೊದಲ್ಲಿ ಸೆರೆ-ವೀಕ್ಷಿಸಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement