ವೀಡಿಯೊ..: ಮುಸ್ಲಿಂ ಮೀಸಲಾತಿ ಬಗ್ಗೆ ಕಾಂಗ್ರೆಸ್‌ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ ಮೋದಿ : ರಾಹುಲ್ ಗಾಂಧಿ ವೈರಲ್ ವೀಡಿಯೊ ಉಲ್ಲೇಖ

ಪಶ್ಚಿಮ ಬಂಗಾಳದ ಜಾರ್‌ಗ್ರಾಮದಲ್ಲಿ ಸೋಮವಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮುಸ್ಲಿಮರಿಗೆ ಮೀಸಲಾತಿ ನೀಡುವ ಸಲುವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಕಸಿದುಕೊಳ್ಳಲು ಕಾಂಗ್ರೆಸ್ ಉದ್ದೇಶಿಸಿದೆ ಎಂದು ಆರೋಪಿಸಿದರು. ಕಾಂಗ್ರೆಸ್‌ ಪಕ್ಷವು ಇನ್ನೂ ಮುಸ್ಲಿಂ ಲೀಗ್‌ನ ಚಿಂತನೆ ಹೊಂದಿರುವ ಕೋಮುವಾದಿ ಪಕ್ಷವಾಗಿದೆ ಎಂದು ಪ್ರಧಾನಿ ಆರೋಪಿಸಿದರು.
“ನನ್ನ ಇತ್ತೀಚಿನ ಸಂದರ್ಶನಗಳಲ್ಲಿ ಅನೇಕ ಪತ್ರಕರ್ತರು ಮುಸ್ಲಿಂ ಮೀಸಲಾತಿಯ ಬಗ್ಗೆ ನನ್ನನ್ನು ಕೇಳಿದರು, ಆದರೆ ನೋಡಿ, ಕಾಂಗ್ರೆಸ್ ‘ಶೆಹಜಾದಾ’ ಸ್ವತಃ ತಮ್ಮ ವೀಡಿಯೊದಲ್ಲಿ ಅದನ್ನು ಒತ್ತಿಹೇಳುತ್ತಿದ್ದಾರೆ” ಎಂದು ಅವರು ಹೇಳಿದರು.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊ ಉಲ್ಲೇಖಿಸಿದ ಪ್ರಧಾನಿ ಮೋದಿ, “ಒಂದೆಡೆ, ಮನಮೋಹನ್ ಸಿಂಗ್ ಅವರು ಭಾರತದ ಸಂಪನ್ಮೂಲಗಳಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿದ್ದರು, ಮತ್ತೊಂದೆಡೆ, ಕಾಂಗ್ರೆಸ್‌ನ ಶೆಹಜಾದಾ, ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡ ವೀಡಿಯೊದಲ್ಲಿ ಕಾಂಗ್ರೆಸ್ ಮುಸ್ಲಿಮರಿಗೆ ಮೀಸಲಾತಿ ನೀಡುತ್ತದೆ ಎಂದು ಹೇಳುತ್ತಿದ್ದಾರೆ.11-12 ವರ್ಷದ ಹಿಂದಿನ ಕಾಂಗ್ರೆಸ್ ಶೆಹಜಾದಾ (ರಾಹುಲ್ ಗಾಂಧಿ) ಅವರ ವೀಡಿಯೊವನ್ನು ನಾನು ನೋಡಿದ್ದೇನೆ ಎಂದು ಪ್ರಧಾನಿ ಹೇಳಿದರು.
ಸೋಶಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ನ ‘ಶೆಹಜಾದ’ ವಿಡಿಯೋವನ್ನು ನೋಡಿದ್ದೇನೆ, 11-12 ವರ್ಷಗಳ ಹಿಂದಿನ ಈ ವೀಡಿಯೊದಲ್ಲಿ ಕಾಂಗ್ರೆಸ್ ನ ಯುವರಾಜ ಮುಸಲ್ಮಾನರಿಗೆ ಕಾಂಗ್ರೆಸ್ ಮೀಸಲಾತಿ ನೀಡುವುದಾಗಿ ಬಹಿರಂಗವಾಗಿ ಹೇಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ವೈರಲ್ ವೀಡಿಯೊದಲ್ಲಿ ರಾಹುಲ್ ಗಾಂಧಿ ಹೇಳಿದ್ದೇನು..?
ಈ ಹಳೆಯ ವೀಡಿಯೋದಲ್ಲಿ ರಾಹುಲ್ ಗಾಂಧಿ, “ನಾವು ಮುಸ್ಲಿಂ ಸಹೋದರರಿಗೆ ಮೀಸಲಾತಿ ನೀಡುತ್ತೇವೆ ಎಂದು ಹೇಳುವುದನ್ನು ಕೇಳಬಹುದು ಎಂದು ಮೋದಿ ಹೇಳಿದ್ದಾರೆ.
ಪ್ರಧಾನಿ ಮೋದಿ ಎಕ್ಸ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದು,“ಅವರ ಮಾತುಗಳು ಮತ್ತು ಅವರ ಭರವಸೆ ಎಲ್ಲರಿಗೂ ಕೇಳಲು. ಅವರು ಎಸ್‌ಸಿ (SC), ಎಸ್‌ಟಿ (ST) ಮತ್ತು ಒಬಿಸಿ (OBC) ಸಮುದಾಯಗಳಿಗೆ ಹಕ್ಕುಗಳನ್ನು ನಿರಾಕರಿಸಲು ಬಯಸುತ್ತಾರೆ, ಬದಲಿಗೆ ಅಸಂವಿಧಾನಿಕವಾಗಿ ಮುಸ್ಲಿಂ ಮೀಸಲಾತಿಗೆ ಆದ್ಯತೆ ನೀಡುತ್ತಾರೆ. ಪೂಜ್ಯ ಬಾಬಾಸಾಹೇಬರ ಸಂವಿಧಾನವನ್ನು ತುಳಿಯಲು ಮೋದಿ ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಪ್ರಮುಖ ಸುದ್ದಿ :-   ಸೇನಾಧಿಕಾರಿ ಸೋಫಿಯಾ ಕುರೇಷಿ ಬಗ್ಗೆ ವಿವಾದಾತ್ಮಕ ಹೇಳಿಕೆ : ಮಧ್ಯಪ್ರದೇಶ ಸಚಿವನ ವಿರುದ್ಧ ಎಫ್ಐಆರ್ ದಾಖಲಿಸಲು ಹೈಕೋರ್ಟ್ ಆದೇಶ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement