ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: 11 ಕಡೆ ಎನ್‌ಐಎ ದಾಳಿ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ (Rameshwaram Cafe Blast) ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮಂಗಳವಾರ ಕರ್ನಾಟಕ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ ದಾಳಿ ನಡೆಸಿದೆ. ಹಾಗೂ 11 ಶಂಕಿತರನ್ನು ವಶಕ್ಕೆ ಪಡೆದಿದೆ.
ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಸಂಚುಕೋರರನ್ನು ಪತ್ತೆ ಮಾಡಲು ರಾಷ್ಟ್ರೀಯ ತನಿಖಾ ದಳವು ನಾಲ್ಕು ರಾಜ್ಯಗಳ 11 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದೆ.ಕರ್ನಾಟಕ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದ 11 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಕರ್ನಾಟಕದಲ್ಲಿ ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಮಂಗಳವಾರ ದಾಳಿಯ ವೇಳೆ ವಶಕ್ಕೆ ಪಡೆದ 11 ಮಂದಿ ಶಂಕಿತರಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿ ಸೇರಿದಂತೆ ಹಲವೆಡೆ 2012ರ ಲಷ್ಕರ್–ಎ–ತಯ್ಬಾ (ಎಲ್‌ಇಟಿ) ಪಿತೂರಿ ಪ್ರಕರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಗಳೂ ಸೇರಿದ್ದಾರೆ. ದಾಳಿ ವೇಳೆ ಡಿಜಿಟಲ್ ಪರಿಕರಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಎನ್‌ಐಎ ಅಧಿಕಾರಿಗಳು ಕೊತ್ತಮತ್ತೂರಿನ ನಾರಾಯಣಗುರು ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದಾರೆ. ಈಗಾಗಲೇ ವಶದಲ್ಲಿರುವ ಶಂಕಿತ ಉಗ್ರರಾದ ಮತೀನ್‌ ಹಾಗೂ ಶಾಹೀಬ್‌ಗೆ ಇಬ್ಬರು ವೈದ್ಯರು ಹಣ ಸಂದಾಯ ಮಾಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ವಿಚಾರಣೆ ನಡೆಸಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಿಸಿದ್ದ ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಮಹತ್ವದ ದಾಖಲೆಗಳನ್ನು ಎನ್‌ಐಎ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇಬ್ಬರು ಶಂಕಿತರೊಂದಿಗೆ ಸಂಪರ್ಕ ಹೊಂದಿದ ನಾಲ್ಕು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ಮಾಡಿ ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
ಮಾರ್ಚ್ 1 ರಂದು ನಡೆದಿದ್ದ ಐಇಡಿ ಬಾಂಬ್ ದಾಳಿಯಿಂದ ಕೆಫೆಗೆ ವ್ಯಾಪಕ ಹಾನಿಯಾಗಿತ್ತು. ಹಲವಾರು ಗ್ರಾಹಕರು ಮತ್ತು ಹೋಟೆಲ್ ಸಿಬ್ಬಂದಿ ಸೇರಿದಂತೆ 10 ಮಂದಿ ಗಾಯಗೊಂಡಿದ್ದರು. ಏಪ್ರಿಲ್‌ 12ರಂದು ಪಶ್ಚಿಮಬಂಗಾಳದ ಮೇದಿನಿಪುರದಲ್ಲಿ ಅಡಗಿದ್ದ ಪ್ರಮುಖ ಆರೋಪಿಗಳಾದ ಅಬ್ದುಲ್‌ ಮತೀನ್‌ ತಾಹಾ ಹಾಗೂ ಮುಸಾವಿರ್‌ ಹುಸೇನ್‌ ಶಾಜೀಬ್‌‍ನನ್ನು ಎನ್‌ಐಎ ಬಂಧಿಸಿತ್ತು.

 

 

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement