ಮೈಸೂರು: ನಗರದ ಯರಗನಹಳ್ಳಿಯಲ್ಲಿ ಮನೆಯೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು, ಮೇ 21ರ ರಾತ್ರಿ ಮಲಗಿದ್ದಲ್ಲೇ ನಿಗೂಢವಾಗಿ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅನಿಲ ಸೋರಿಕೆಯಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಬಟ್ಟೆ ಇಸ್ತ್ರಿ ಮಾಡುವ ಕೆಲಸ ಮಾಡುತ್ತಿದ್ದ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ, ಮೃತರನ್ನು ಕುಮಾರಸ್ವಾಮಿ (45), ಪತ್ನಿ ಮಂಜುಳ (39), ಮಕ್ಕಳಾದ ಅರ್ಚನಾ (19), ಸ್ವಾತಿ (17) ಎಂದು ಗುರುತಿಸಲಾಗಿದೆ. ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಕಳೆದ ಎರಡು ದಿನಗಳಿಂದ ಮನೆಯ ಬಾಗಿಲು ತೆರೆದಿರಲಿಲ್ಲ, ಮಕ್ಕಳು ಕಾಲೇಜಿಗೆ ಬಾರದಿದ್ದ ಕಾರಣ ಅವರ ಸ್ನೇಹಿತರು ಮನೆಗೆ ಬಂದು ನೋಡಿದಾಗ ಿದುಬೆಳಕಿಗೆ ಬಂದಿದೆ ಎನ್ನಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ. ಅನಿಲ ಸೋರಿಕೆಯಿಂದ ಸಾವು ಸಂಭವಿಸರಬಹುದು ಎಂದು ಶಂಕಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ