ಬಿಜೆಪಿ ಶಾಸಕ ಹರೀಶ ಪೂಂಜಾ ವಿರುದ್ದ ಮತ್ತೊಂದು ಎಫ್ಐಆರ್

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಠಾಣಾ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನ ಮಾಡಿದ್ದಲ್ಲದೆ, ಬೆದರಿಕೆ ಒಡ್ಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಮರಳುಗಾರಿಗೆ ಸಂಬಂಧ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಬಿಜೆಪಿ‌ ಮುಖಂಡನ ಪರ ಯಾವುದೇ ಅನುಮತಿ ಇಲ್ಲದೇ ಬೆಳ್ತಂಗಡಿಯಲ್ಲಿ ಶಾಸಕ ಪೂಂಜಾ ತನ್ನ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಯಲ್ಲಿ ‘ಪೊಲೀಸರ ಕಾಲರ್ ಪಟ್ಟಿ ಹಿಡಿಯುತ್ತೇನೆ ಎಂದು ಪೊಲೀಸರ ವಿರುದ್ಧ ನಿಂದನಾತ್ಮಕವಾಗಿ ಮಾತನಾಡಿದ್ದರು. ಹಾಗೂ ಪೊಲೀಸರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಒಡ್ಡಿದ್ದರು ಎಂದು ಆರೋಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ವಿವಿಧ ಸೆಕ್ಷನ್ ಗಳ ಅಡಿ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರಿಗೆ ಜೀವ ಬೆದರಿಕೆ ಒಡ್ಡಿದ ಹಾಗೂ ತಾಲೂಕು ಕಚೇರಿಗೆ ಬರುವ ಸಾರ್ವಜನಿಕರಿಗೂ ತಡೆ ಆರೋಪ ಮೇರೆಗೆ ಐಪಿಸಿ 143, 147, 341, 504, 506 ಜೊತೆಗೆ 149 ಐ.ಪಿ.ಸಿಯಂತೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಪ್ರಮುಖ ಸುದ್ದಿ :-   ಅಥಣಿ | ಶಾಲೆಯಲ್ಲಿ ಆಟವಾಡುವಾಗಲೇ ಹೃದಯಾಘಾತ ; ವಿದ್ಯಾರ್ಥಿನಿ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement