ಬೆಂಗಳೂರು : ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್.ಡಿ. ರೇವಣ್ಣ ಪತ್ನಿ ಭವಾನಿ ಅವರ ಕಾರು ಚಾಲಕ ಅಜಿತ ಅವರಿಗೆವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.
ಪ್ರಕರಣದ ಸಂತ್ರಸ್ತೆಯನ್ನು ಚಾಲಕ ಅಜಿತ ಕಾರಿನಲ್ಲಿ ಕರೆದೊಯ್ದಿದ್ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಂತ್ರಸ್ತೆಯ ಅಪಹರಣ ಪ್ರಕರಣ ಸಂಬಂಧ ಎಸ್ಐಟಿ 2 ಬಾರಿ ಸಮನ್ಸ್ ನೀಡಿತ್ತು. ಆದರೆ ಅಜಿತ್ ಅಪಹರಣ ಪ್ರಕರಣ ದಾಖಲಾದ ಬಳಿಕ ಪರಾರಿಯಾಗಿದ್ದಾನೆ. ಹೀಗಾಗಿ ಹೊಳೆನರಸೀಪುರದಲ್ಲಿರುವ ಆತನ ನಿವಾಸಕ್ಕೆ ತೆರಳಿ ಈಗ ಮತ್ತೊಮ್ಮೆ ಸಮನ್ಸ್ ನೀಡಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ