ಬೆಂಗಳೂರು: ರಾಜ್ಯದಲ್ಲಿ ಜೂನ್ 3ರಂದು ನಡೆಯಲಿರುವ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಐವರನ್ನು ಕಾಂಗ್ರೆಸ್ ಗುರುವಾರ ಪಕ್ಷದಿಂದ ಉಚ್ಚಾಟನೆ ಮಾಡಿದೆ.
ಕರ್ನಾಟಕ ವಿಧಾನ ಪರಿಷತ್ತಿಗೆ ಒಟ್ಟು 6 ಕ್ಷೇತ್ರಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಟಿಕೆಟ್ ಕೈತಪ್ಪಿದ ಕೆಲ ನಾಯಕರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಸೂಚನೆ ಮೇರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ ಅವರು ಒಟ್ಟು ಐವರು ಬಂಡಾಯ ಅಭ್ಯರ್ಥಿಗಳನ್ನು ಉಚ್ಚಾಟಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.
ಉಚ್ಚಾಟನೆಗೊಂಡವರು
ನೈಋತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ -ಎಸ್.ಪಿ.ದಿನೇಶ
ಬೆಂಗಳೂರು ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ- ಫರ್ಡಿನಾಂಡ್ ಲಾರೆನ್ಸ್
ನೈಋತ್ಯ ಶಿಕ್ಷಕರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಅಭ್ಯರ್ಥಿ -ಬಿ.ಆರ್.ನಂಜೇಶ
ಆಗ್ನೇಯ ಶಿಕ್ಷಕರ ಕ್ಷೇತ್ರದ ಬಂಡಾಯ ಅಭ್ಯರ್ಥಿಗಳಾದ ಲೋಕೇಶ ತಾಳಿಕಟ್ಟೆ ಮತ್ತು ವಿನೋದ ಶಿವರಾಜ ಅವರನ್ನು ಆರು ವರ್ಷಗಳ ವರೆಗೆ ಕಾಂಗ್ರೆಸ್ನಿಂದ ಉಚ್ಚಾಟಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ