
ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಒಟೆರಾ ಹೋಟೆಲ್ ಸೇರಿದಂತೆ ಮೂರು ಪ್ರತಿಷ್ಠಿತ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆಯ ಇಮೇಲ್ ಕಳುಹಿಸಲಾಗಿದ್ದು, ಅಧಿಕಾರಿಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಆಗ್ನೇಯ ಬೆಂಗಳೂರು ಡಿಸಿಪಿ ಪ್ರಕಾರ, ಪೊಲೀಸರು, ಬಾಂಬ್ ಸ್ಕ್ವಾಡ್ ಮತ್ತು ಸ್ನಿಫರ್ ಡಾಗ್‌ಗಳನ್ನು ಹೊಟೇಲ್‌ಗಳಿಗೆ ಕಳುಹಿಸಲಾಗಿದೆ.
ಮಧ್ಯರಾತ್ರಿ 2 ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಹೇಳಲಾಗಿದೆ. ಗುರುವಾರ ಬೆಳಗ್ಗೆ ಹೋಟೆಲ್ ಸಿಬ್ಬಂದಿ ಇ-ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಕಳುಹಿಸಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಒಟೆರಾ ಹೋಟೆಲ್ ಸೇರಿದಂತೆ ಮೂರು ಪ್ರತಿಷ್ಠಿತ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆಯ ಇಮೇಲ್ ಕಳುಹಿಸಲಾಗಿದ್ದು, ಅಧಿಕಾರಿಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಆಗ್ನೇಯ ಬೆಂಗಳೂರು ಡಿಸಿಪಿ ಪ್ರಕಾರ, ಪೊಲೀಸರು, ಬಾಂಬ್ ಸ್ಕ್ವಾಡ್ ಮತ್ತು ಸ್ನಿಫರ್ ಡಾಗ್‌ಗಳನ್ನು ಹೊಟೇಲ್‌ಗಳಿಗೆ ಕಳುಹಿಸಲಾಗಿದೆ.
ಮಧ್ಯರಾತ್ರಿ 2 ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಹೇಳಲಾಗಿದೆ. ಗುರುವಾರ ಬೆಳಗ್ಗೆ ಹೋಟೆಲ್ ಸಿಬ್ಬಂದಿ ಇ-ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಕಳುಹಿಸಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ದೆಹಲಿಯ ಗೃಹ ಸಚಿವಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್ ಬುಧವಾರ ಬಂದಿತ್ತು. ಮೇ 13ರಂದು ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದ ಜೈನ್ ಹೆರಿಟೇಜ್ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಮರುದಿನವೇ ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲಿಪುರದ ಕನಕಪುರ ರಸ್ತೆ ಸೋಮನಹಳ್ಳಿ ಬಳಿಯ ಈಡಿಫೈ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ನಂತರ ಎರಡೂ ಬೆದರಿಕೆ ಸಂದೇಶಗಳು ಹುಸಿ ಎಂಬುದು ತಿಳಿದುಬಂದಿತ್ತು.
ದೇಶದಾದ್ಯಂತ ಹುಸಿ ಬಾಂಬ್ ದಾಳಿ ಬೆದರಿಕೆ ಸಂದೇಶಗಳು ಕಳೆದ ಕೆಲವು ತಿಂಗಳುಗಳಲ್ಲಿ ಹೆಚ್ಚಾಗಿವೆ. ಪ್ರಮುಖವಾಗಿ, ದೆಹಲಿ, ಬೆಂಗಳೂರು, ಅಹಮದಾಬಾದ್, ಜೈಪುರ ಮತ್ತು ಲಕ್ನೋದಂತಹ ಪ್ರಮುಖ ನಗರಗಳಲ್ಲಿನ ಶಾಲೆಗಳು, ಆಸ್ಪತ್ರೆಗಳು ಮತ್ತು ದೆಹಲಿ, ಮುಂಬೈ, ಗೋವಾ, ನಾಗ್ಪುರ ಮತ್ತು ಕೋಲ್ಕತ್ತಾದ ವಿಮಾನ ನಿಲ್ದಾಣಗಳಿಗೆ ಬೆದರಿಕೆ ಸಂದೇಶಗಳು ಬಂದಿತ್ತು ಎಂದು ವರದಿಯಾಗಿದ್ದವು.


ನಿಮ್ಮ ಕಾಮೆಂಟ್ ಬರೆಯಿರಿ