ಬೆಳಗಾವಿಯಲ್ಲಿ ಗುಂಪು ಘರ್ಷಣೆ, ಕಲ್ಲು ತೂರಾಟ

ಬೆಳಗಾವಿ : ಮಕ್ಕಳು ಕ್ರಿಕೆಟ್ ಆಟ ಆಡುವಾಗ ಆರಂಭವಾದ ಜಗಳ ದೊಡ್ಡವರ ಮಟ್ಟಿಗೆ ವಿಕೋಪಕ್ಕೆ ಗುಂಪು ಘರ್ಷಣೆ ನಡೆದು ಕಲ್ಲು ತೂರಾಟವಾದ ಘಟನೆ ಬೆಳಗಾವಿ ಶಹಾಪುರ ಅಳವಾನ್ ಗಲ್ಲಿ ಪ್ರದೇಶದಲ್ಲಿ ಗುರುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ.
ಮಕ್ಕಳು ಕ್ರಿಕೆಟ್ ಆಟವಾಡುವಾಗ ನಡೆದ ಸಣ್ಣ ಗಲಾಟೆ ವಿಕೋಪಕ್ಕೆ ಹೋಗಿ ವಾದ-ವಿವಾದ ಉಂಟಾಗಿದೆ. ಇದರಿಂದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು ಕಲ್ಲು ತೂರಾಟವಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
ಅಳವಾನ್ ಗಲ್ಲಿಯಲ್ಲಿ ಮಕ್ಕಳು ಕ್ರಿಕೆಟ್ ಆಡುವಾಗ ಜಗಳವಾಗಿದೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿದೆ. ಗಲಾಟೆ ಆಗುವಾಗ ದೊಡ್ಡವರು ಬಂದಿದ್ದಾರೆ.‌ ಜಗಳ ವಿಕೋಪಕೆ ಹೋಗಿ ಕೆಲವರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಸ್ಥಳದಲ್ಲಿ ಹೆಚ್ಚಿ‌ನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement