ಶಿವಮೊಗ್ಗ : ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.
ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಕಾಗೋಡು ತಿಮ್ಮಪ್ಪ ಅವರನ್ನು ಸಾಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಗೋಡು ತಿಮ್ಮಪ್ಪನವರಿಗೆ ಜ್ವರ ಹಾಗೂ ತೀವ್ರ ಸುಸ್ತು ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಸಾಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಕುಟುಂಬದವರು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆತಂದಿದ್ದಾರೆ ಎಂದು ಹೇಳಲಾಗಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿದು ಬಂದಿದೆ.
ಸುದೀರ್ಘ ರಾಜಕಾರಣದ ಅನುಭವಹೊಂದಿರುವ ಕಾಗೋಡು ತಿಮ್ಮಪ್ಪ ಅವರು ವಿಧಾನಸಭಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ಸರ್ಕಾರದಲ್ಲಿ ಕಂದಾಯ ಸಚಿವರು, ಆರೋಗ್ಯ ಮತ್ತು ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ