ಹಾವೇರಿ: ತಿರುಪತಿಗೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಲಗೇರಿ ಬೈಪಾಸ್ ಬಳಿ ನಡೆದಿದೆ ಎಂದು ವರದಿಯಾಗಿದೆ.
ಸುರೇಶ ವೀರಪ್ಪ ಜಾಡಿ (45), ಐಶ್ವರ್ಯ ಈರಪ್ಪ ಬಾರ್ಕಿ (22) ಹಾಗೂ ಚೇತನಾ ಪ್ರಭುರಾಜ ಸಮಗಂಡಿ (7) ಸ್ಥಳದಲ್ಲೇ ಮೃತಪಟ್ಟಿದ್ದು, ಪ್ರಮೀಳಾ (28) ಎಂಬವರು ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಹಾವೇರಿ ಪಟ್ಟಣದ ಅಶ್ವಿನಿ ನಗರದ ಸಮಗಂಡಿ ಮತ್ತು ಬಾರ್ಕಿ ಎಂಬ ಎರಡು ಕುಟುಂಬಗಳು ದೇವರ ದರ್ಶನಕ್ಕೆಂದು ತಿರುಪತಿಗೆ ತೆರಳುತ್ತಿದ್ದರು. ಈ ವೇಳೆ ರಾಣೇಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಮಧ್ಯರಾತ್ರಿ 12:30ರ ಸುಮಾರಿಗೆ ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಈ ಅಪಘಾತದಲ್ಲಿ ನಾಲ್ವರು ಸಾವಿಗೀಡಾಗಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಎಫ್‌ಎಸ್‌ಎಲ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ