ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಜಿಪಂ, ತಾಪಂ, ಬಿಬಿಎಂಪಿ ಚುನಾವಣೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಾಗುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮೈಸೂರಿನಲ್ಲಿ ಹೇಳಿದ್ದಾರೆ.
ಇಂದು, ಶುಕ್ರವಾರ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ಉಪಾಹಾರ ಸೇವನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ವೇಳೆ ರಾಜ್ಯ ಸರ್ಕಾರ ಸ್ಥಳೀಯ ಸಂಘ–ಸಂಸ್ಥೆಗಳಿಗೆ ಚುನಾವಣೆ ನಡೆಸದಿದ್ದರೆ ಚುನಾವಣಾ ಆಯೋಗ ಹೈಕೋರ್ಟ್ ಮೊರೆ ಹೋಗುವುದಾಗಿ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ತಾಲೂಕು ಮತ್ತು ಜಿಲ್ಲಾ ಪಂಚಾಯತ ಚುನಾವಣೆ ನಡೆಸಲಾಗುವುದು. ಹಾಗೂ ಡಿಲಿಮಿಟೇಶನ್ ಪ್ರಕ್ರಿಯೆ ಮುಗಿದ ಬಳಿಕ ಬೃಹತ್ ಬೆಂಗಳೂರು ಮಹಾನಹರ ಪಾಲಿಕೆ (ಬಿಬಿಎಂಪಿ)ಗೂ ಚುನಾವಣೆ ನಡೆಸಲಾಗುವುದು ಎಂದು ಹೇಳಿದರು.

ಕ್ಷೇತ್ರ ಪುನರ್ವಿಗಂಡನೆಗೆ ಜನವರಿ ವರೆಗೆ ಗಡುವು ಇದ್ದ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆಯೇ ಮಾಡುತ್ತೇವೆ ಎಂದರು.
ತಮ್ಮ ಪುತ್ರ ಯತೀಂದ್ರ ಅವರನ್ನು ವಿಧಾನ ಪರಿಷತ್ ಸದಸ್ಯರನ್ನು ಮಾಡುವ ಬಗ್ಗೆ ಹಬ್ಬಿರುವ ವದಂತಿಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯತೀಂದ್ರ ತನಗೆ ವರುಣ ಕ್ಷೇತ್ರ ಬಿಟ್ಟುಕೊಟ್ಟಾಗಲೇ ಪಕ್ಷದ ಹೈಕಮಾಂಡ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವ ಭರವಸೆ ನೀಡಿತ್ತು. ಆದರೆ ಮಾಡುವುದು ಬಿಡುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ ಎಂದರು.

ಪ್ರಮುಖ ಸುದ್ದಿ :-   ಕಾರವಾರ : ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಸಾವು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement