ಮೂಡಿಗೆರೆ : ಲಾರಿ – ಓಮ್ನಿ ಕಾರು ನಡುವೆ ಡಿಕ್ಕಿ ; ನಾಲ್ವರು ಸಾವು, ಹಲವರಿಗೆ ಗಾಯ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಶುಕ್ರವಾರ ಲಾರಿ ಹಾಗೂ ಓಮ್ನಿ  ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರ ಮಧ್ಯಾಹ್ನ ಬಣಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರು ಚಿತ್ರದುರ್ಗ ಮೂಲದವರು ಎಂದು ಹೇಳಲಾಗಿದೆ.
ಕುಟುಂಬವೊಂದು ಎರಡು ಕಾರುಗಳಲ್ಲಿ ಧರ್ಮಸ್ಥಳಕ್ಕೆ ತೆರಳಿತ್ತು. ಧರ್ಮಸ್ಥಳದ ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದುಓಮ್ನಿ ವ್ಯಾನ್ ಮತ್ತು ಆಲ್ಟೊ ಕಾರಿನಲ್ಲಿ ಚಿತ್ರದುರ್ಗಕ್ಕೆ ವಾಪಸ್ ಬರುತ್ತಿದ್ದರು.

ಚಾರ್ಮಾಡಿ ಘಾಟಿ ಹತ್ತಿರ ಕೊಟ್ಟಿಗೆಹಾರ ದಾಟಿ ಮೂಡಿಗೆರೆ ಕಡೆಗೆ ಬರುತ್ತಿದ್ದಾಗ ಎದುರಿನಿಂದ ಬಂದ ಲಾರಿಯು ಓಮ್ನಿ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ನಂತರ ಓಮ್ನಿ ಹಿಂದೆ ಬರುತ್ತಿದ್ದ ಆಲ್ಟೊ ಕಾರು ಕೂಡ ವ್ಯಾನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, 12 ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಮೂವರಿಗೆ ಗಂಬೀರ ಗಾಯಗಳಾಗಿವೆ ಎಂದು ಹೇಳಲಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.  ಅಪಘಾತದ ಭೀಕರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಆಗಮಿಸಿರುವ ಮೂಡಿಗೆರೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಬೆಳಗಾವಿ | ಮಸೀದಿಯಲ್ಲಿದ್ದ ಕುರಾನ್ ಕದ್ದೊಯ್ದು ಸುಟ್ಟು ಹಾಕಿದ ಕಿಡಿಗೇಡಿಗಳು ; ಪ್ರತಿಭಟನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement