ದೆಹಲಿಯ ಬೇಬಿ ಕೇರ್​ ಸೆಂಟರ್​ನಲ್ಲಿ ಅಗ್ನಿ ಅವಘಡ ; 7 ನವಜಾತ ಶಿಶುಗಳು ಸಾವು

ನವದೆಹಲಿ: ಶನಿವಾರ ತಡರಾತ್ರಿ ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ನವಜಾತ ಶಿಶುಗಳು ಮೃತಪಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೂರ್ವ ದೆಹಲಿಯ ವಿವೇಕ ವಿಹಾರ ಪ್ರದೇಶದಲ್ಲಿನ ಬೇಬಿ ಕೇರ್ ಸೆಂಟರ್‌ನಲ್ಲಿ ರಾತ್ರಿ 11:32ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು ತಿಳಿಸಿದ್ದು, ನಂತರ 16 ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿವೆ.
ಆಸ್ಪತ್ರೆಯಲ್ಲಿ 12 ನವಜಾತ ಶಿಶುಗಳು ದಾಖಲಾಗಿದ್ದವು. ಅವರೆಲ್ಲರನ್ನೂ ರಕ್ಷಿಸಿ ಚಿಕಿತ್ಸೆಗಾಗಿ ಪೂರ್ವ ದೆಹಲಿ ಅಡ್ವಾನ್ಸ್ ಎನ್‌ಐಸಿಯು ಆಸ್ಪತ್ರೆಗೆ ವಿವೇಕ್ ವಿಹಾರ್‌ಗೆ ಸ್ಥಳಾಂತರಿಸಲಾಗಿದೆ. ಈ ಪೈಕಿ ಚಿಕಿತ್ಸೆ ವೇಳೆ 6 ಆರು ನವಜಾತ ಶಿಶುಗಳು ಮೃತಪಟ್ಟಿವೆ ಎಂದು ಘೋಷಿಸಲಾಯಿತು ಮತ್ತು ಒಂದು ಬೆಳಿಗ್ಗೆ ಸಾವಿಗೀಡಾಗಿದೆ. ಏಳು ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಟಿಬಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಸದ್ಯ ಐವರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
ದುರಂತದ ಬಗ್ಗೆ ಪ್ರತಿಕ್ರಿಯಿಸಿದ ದೆಹಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್, “ಯಾವುದೇ ನಿರ್ಲಕ್ಷ್ಯ ಅಥವಾ ತಪ್ಪು ಕೆಲಸದಲ್ಲಿ ಭಾಗಿಯಾಗಿರುವವರಿಗೆ ಕಠಿಣ ಶಿಕ್ಷೆ ಖಚಿತ” ಎಂದು ಹೇಳಿದರು.
“ತುಂಬಾ ದುರದೃಷ್ಟಕರ ಘಟನೆ ವರದಿಯಾಗಿದೆ. ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಅಪ್‌ಡೇಟ್ ಮಾಡಲು ನಾನು ಕಾರ್ಯದರ್ಶಿ (ಆರೋಗ್ಯ) ಅವರನ್ನು ಕೇಳಿದ್ದೇನೆ. ಅಪರಾಧಿಗಳನ್ನು ಬಿಡಲಾಗುವುದಿಲ್ಲ. ನಿರ್ಲಕ್ಷ್ಯ ಅಥವಾ ಯಾವುದೇ ತಪ್ಪು ಮಾಡುವಲ್ಲಿ ಭಾಗಿಯಾಗಿರುವವರಿಗೆ ಕಠಿಣ ಶಿಕ್ಷೆಯನ್ನು ಖಾತ್ರಿಪಡಿಸಲಾಗುವುದು” ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಶನಿವಾರ ಮುಂಜಾನೆ, ಗುಜರಾತ್‌ನ ರಾಜ್‌ಕೋಟ್‌ನ ಗೇಮಿಂಗ್ ವಲಯದಲ್ಲಿ ಸಂಭವಿಸಿದ ಭಾರಿ ಬೆಂಕಿಯಲ್ಲಿ ಒಂಬತ್ತು ಮಕ್ಕಳು ಸೇರಿದಂತೆ 27 ಜನರು ಸಾವಿಗೀಡಾಗಿದ್ದಾರೆ..

ಪ್ರಮುಖ ಸುದ್ದಿ :-   ಮೊದಲು ಹಾಲಿನಲ್ಲಿ ನಿದ್ದೆ ಮಾತ್ರೆ...ನಂತರ ಹಾಸಿಗೆ ಮೇಲೆ ವಿಷದ ಹಾವು ! ಗಂಡನ ಕೊಲೆಗೆ ಪತ್ನಿಯ ಭಯಾನಕ ಸಂಚು...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement