ಹಾಸನ : ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ಇಂದು, ಭಾನುವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ ಮತ್ತು ಕಾರು ಚಾಲಕ ರಾಕೇಶ ಘಟನೆಯಲ್ಲಿ ಸಾವಿಗೀಡಾಗಿದ್ದಾರೆ. ಮೃತಪಟ್ಟ ಆರು ಮಂದಿಯೂ ಚಿಕ್ಕಬಳ್ಳಾಪುರ ಮೂಲದವರಾಗಿದ್ದು, ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ಭೇಟಿಯಾಗಿ ವಾಪಸ್ ಬರುವಾಗ ಈ ಅಪಘಾತ ಸಂಭವಿಸಿದೆ. ಈ ವೇಳೆ ಚಾಲಕ ನಿದ್ದೆ ಮಂಪರಿನಲ್ಲಿ ಅಪಘಾತ ನಡೆದಿರಬಹುದು ಎಂಬ ಶಂಕಿಸಲಾಗಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಹಾರಿ ಕಂಟೇನರ್‌ಗೆ ಗುದ್ದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಠಾಣಾ ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರು ಮೃತದೇಹಗಳನ್ನು ಹೊರ ತೆಗೆಯಲು ಹರಸಾಹಸ ಪಟ್ಟಿದ್ದಾರೆ. ಇನ್ನು ಹಾಸನ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಿಮ್ಮ ಕಾಮೆಂಟ್ ಬರೆಯಿರಿ