ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ಎಳೆದೊಯ್ದು ಕೊಂದುಹಾಕಿದ ಹುಲಿ

ಮೈಸೂರು: ಮೇಕೆಗಳನ್ನು ಮೇಯಿಸುತ್ತಿದ್ದಾಗ ಹಠಾತ್ ದಾಳಿ ನಡೆಸಿದ ಹುಲಿಯೊಂದು ಮಹಿಳೆಯನ್ನು ಹೊತ್ತೊಯ್ದ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಮೂರ್ಬಾಂದ್ ಬೆಟ್ಟದ ಬಳಿ ಶನಿವಾರ ಸಂಜೆ ನಡೆದಿದ್ದು, ಮಹಿಳೆಯ ಮೃತದೇಹ ಭಾನುವಾರ ಬೆಳಗ್ಗೆ ದೊರೆತಿದೆ.
ಎನ್.ಬೇಗೂರು ಸಮೀಪದ ಮಾಳದ ಹಾಡಿ ನಿವಾಸಿಯಾದ ಚಿಕ್ಕಿ (48) ಹುಲಿ ದಾಳಿಗೆ ಸಿಲುಕಿ ಮೃತಪಟ್ಟ ಮಹಿಳೆಯಾಗಿದ್ದಾರೆ. ಮೂರ್ಬಾಂದ್ ಬೆಟ್ಟದ ಸಮೀಪ ಮೇಕೆ ಮೇಯಿಸುತ್ತಿದ್ದಾಗ ಘಟನೆ ಸಂಭವಿಸಿದ್ದು, ಮಹಿಳೆ ಮೇಲೆ ಹುಲಿ ದಾಳಿ ನಡೆಸಿ ದೇಹವನ್ನು ಕಾಡಿನೊಳಗೆ ಎಳೆದುಕೊಂಡು ಹೋಗಿತ್ತು. ಮಹಿಳೆಯೊಂದಿಗೆ ಕುರಿ ಮೇಯಿಸುತ್ತಿದ್ದ ಸಹಚರ ಗ್ರಾಮಕ್ಕೆ ಓಡಿ ಹೋಗಿ ಮಾಹಿತಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಎನ್.ಬೇಗೂರು ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶನಿವಾರ ಮೃತದೇಹಕ್ಕಾಗಿ ಹುಡುಕಾಟ ನಡೆದರೂ ಕತ್ತಲಾದ್ದರಿಂದ ಸಿಕ್ಕಿರಲಿಲ್ಲ. ಬಳಿಕ ಭಾನುವಾರ ಬೆಳಗ್ಗೆ ಅರಣ್ಯ ವೀಕ್ಷಣೆಯ ಟವರ್ ಮೇಲೆ ಶವ ಪತ್ತೆಯಾಗಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement