ಲೋಕಸಭೆ ಚುನಾವಣೆಯ ಅಂತಿಮ ಹಂತದ ಚುನಾವಣಾ ಪ್ರಚಾರಕ್ಕಾಗಿ ಬಿಹಾರಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿ ಕಾರ್ಯಕ್ರಮದ ವೇದಿಕೆ ಹಠಾತ್ ಕುಸಿದಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇಂಡಿಯಾ ಮೈತ್ರಿಕೂಟದ ಇತರ ನಾಯಕರು ದೊಡ್ಡ ಅನಾಹುತದಿಂದ ಪಾರಾಗಿದ್ದಾರೆ.
ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ ಮುನ್ನ ನಾಯಕರು ಒಗ್ಗಟ್ಟು ಪ್ರದರ್ಶಿಸಲು ವೇದಿಕೆ ಮೇಲೆ ಕೈ ಹಿಡಿದು ನಿಂತಿದ್ದಾಗ ಇದ್ದಕ್ಕಿದ್ದಂತೆ, ವೇದಿಕೆ ಕುಸಿದಿದೆ. ಅದರ ಮೇಲಿದ್ದ ಎಲ್ಲರೂ ತಮ್ಮ ಸಮತೋಲನವನ್ನು ಕಳೆದುಕೊಂಡರು.ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಲಾಲು ಪ್ರಸಾದ್ ಅವರ ಪುತ್ರಿ ಮಿಸಾ ಭಾರತಿ ಪಕ್ಕದಲ್ಲಿದ್ದರು
ಪಾಟ್ನಾದ ಹೊರವಲಯದಲ್ಲಿರುವ ಪಾಲಿಗಂಜ್‌ನಲ್ಲಿ ಈ ಘಟನೆ ನಡೆದಿದ್ದು, ಪಾಟ್ಲಿಪುತ್ರ ಲೋಕಸಭಾ ಸ್ಥಾನಕ್ಕೆ ಮಿಸಾ ಭಾರ್ತಿ ಅವರು ಸ್ಪರ್ಧಿಸಿದ್ದು, ಅವರನ್ನು ಬೆಂಬಲಿಸಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಘಟನೆಯ ನಂತರ, ಗಾಂಧಿಯವರು ರ್ಯಾಲಿಯನ್ನು ಮುಂದುವರೆಸಿದರು, ಜನಸಮೂಹವನ್ನುದ್ದೇಶಿಸಿ ಮಾತನಾಡಿದರು.
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ, ಅಗ್ನಿಪಥ ಯೋಜನೆಯನ್ನು ರದ್ದುಪಡಿಸುತ್ತೇವೆ ಮತ್ತು ಪ್ರತಿ ಮಹಿಳೆಯ ಖಾತೆಗೆ 8,500 ರೂ.ಗಳನ್ನು ಪ್ರತಿ ತಿಂಗಳು ಜಮಾ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.
ಚುನಾವಣೆಯ ನಂತರ ಇಂಡಿಯಾ ಬಣ ಸರ್ಕಾರವನ್ನು ರಚಿಸಿದರೆ, ಅವರು ಎಲ್ಲಾ ಮುಚ್ಚಿದ ಕೈಗಾರಿಕೆಗಳನ್ನು ಮತ್ತೆ ಆರಂಭಿಸುತ್ತೇವೆ ಮತ್ತು 30 ಲಕ್ಷ ಉದ್ಯೋಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದರು.
ಆರ್‌ಜೆಡಿ ನಾಯಕ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನಿಸ್ಟ್) ಲಿಬರೇಶನ್ ಪ್ರಧಾನ ಕಾರ್ಯದರ್ಶಿ ದೀಪಂಕರ ಭಟ್ಟಾಚಾರ್ಯ, ವಿಕಾಸಶೀಲ್ ಇನ್ಸಾನ್ ಪಾರ್ಟಿ (ವಿಐಪಿ) ಮುಖ್ಯಸ್ಥ ಮುಖೇಶ್ ಸಾಹ್ನಿ ಮತ್ತು ಇತರ ಿಂಡಿಯಾ ಒಕ್ಕೂಟದ ನಾಯಕರು ರ್ಯಾಲಿಗಳಲ್ಲಿ ಪಾಲ್ಗೊಂಡಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ