ಯಡಿಯೂರಪ್ಪ ವಿರುದ್ಧ ಪೋಕ್ಸೋ ದಾಖಲಿಸಿದ್ದ ಮಹಿಳೆ ಸಾವು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಿ. ಎಸ್. ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ.
17 ವರ್ಷದ ತಮ್ಮ ಪುತ್ರಿ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಮಾರ್ಚ್‌ 14ರಂದು ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.
ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದ 53 ವರ್ಷದ ಮಹಿಳೆ ಮಹಿಳೆ ಮೇ 26ರ ಭಾನುವಾರ ಬೆಂಗಳೂರಿನ ಹುಳಿಮಾವು ಪ್ರದೇಶದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದಾಗಿ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದರು.
ಆದರೆ ಚಿಕಿತ್ಸ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪೊಲೀಸ್ ಇಲಾಖೆ ಮೂಲಗಳ ಮಾಹಿತಿ ಪ್ರಕಾರ ಮಹಿಳೆ ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಮಹಿಳೆಗೆ 17 ವರ್ಷದ ಪುತ್ರಿ ಇರುವುದು ಬಿಟ್ಟರೆ ಕುಟುಂಬದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಸಹಾಯ ಕೇಳಲು ಹೋದಾಗ ಯಡಿಯೂರಪ್ಪ ಡಾಲರ್ಸ್ ಕಾಲೋನಿ ನಿವಾಸದಲ್ಲಿ ತಮ್ಮ 17 ವರ್ಷದ ಪುತ್ರಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ಸದಾಶಿವ ನಗರ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಮಾರ್ಚ್‌ 14ರಂದು ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣದ ದಾಖಲು ಮಾಡಲಾಗಿತ್ತು. ಯಡಿಯೂರಪ್ಪ ಅವರ ನಿವಾಸಕ್ಕೆ ಫೆಬ್ರವರಿ 2, 2024ರಂದು ಭೇಟಿ ನೀಡಿದಾಗ ದೌರ್ಜನ್ಯ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು ಮಾರ್ಚ್‌ 15ರಂದು ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು.
ಈ ದೂರಿನ ಕುರಿತು ಬಿ. ಎಸ್.‌ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದರು, “ಅನ್ಯಾಯವಾಗಿದೆ. ನ್ಯಾಯ ಕೊಡಿಸಿ ಎಂದು ತಾಯಿ, ಮಗಳು ಹಲವು ಸಲ ನನ್ನ ಬಳಿ ಬಂದಿದ್ದರು. ಅವರನ್ನು ಪೊಲೀಸ್ ಆಯುಕ್ತರ ಬಳಿ ಕಳಿಸಿಕೊಟ್ಟಿದ್ದೆ. ಆದಾದ ಮೇಲೆ ನನ್ನ ವಿರುದ್ಧ ಏನೇನೋ ಆರೋಪ ಮಾಡಿದರು” ಎಂದು ಯಡಿಯೂರಪ್ಪ ಹೇಳಿದ್ದರು.

ಪ್ರಮುಖ ಸುದ್ದಿ :-   ಬೆಂಗಳೂರಿನಲ್ಲಿ ಮಳೆ ಅವಾಂತರಕ್ಕೆ ಮೂವರು ಸಾವು

 

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement