ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ಲೀಲ ವೀಡಿಯೊ ಹರಿಬಿಟ್ಟವರನ್ನು ಎಸ್ಐಟಿ ಬಂಧಿಸಿದೆ ಎಂದು ವರದಿಯಾಗಿದೆ.
ಆರೋಪಿಗಳಾದ ನವೀನ ಗೌಡ, ಚೇತನ ಎಂಬವರನ್ನು ಎಸ್ಐಟಿ ಬಂಧಿಸಿದೆ ಎಂದು ವರದಿಯಾಗಿದೆ. ವೀಡಿಯೊ ವೈರಲ್ ಮಾಡಿದ್ದವರನ್ನು ಬಂಧಿಸದಕ್ಕೆ ಎಚ್ಡಿ ಕುಮಾರಸ್ವಾಮಿ ಅವರು ಸಾಕಷ್ಟು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ದೂರು ದಾಖಲಾದ ಒಂದು ತಿಂಗಳು ಬಳಿಕ ಇಬ್ಬರು ಆರೋಪಿಗಳ ಬಂಧನವಾಗಿದೆ.
ಪ್ರಜ್ವಲ್ ಅಶ್ಲೀಲ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ಆರೋಪಿ ನವೀನ್ ಗೌಡ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದ. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಪ್ರಜ್ವಲ್ ರೇವಣ್ಣ ವೀಡಿಯೋ ನೋಡಲು ಈ ವಾಟ್ಸಾಪ್ ಚಾನಲ್ ಫಾಲೋ ಮಾಡಿ ಎಂದು ಫೇಸ್ಬುಕ್ನಲ್ಲಿಚಪೋಸ್ಟ್ ಮಾಡಿದ್ದ. ನಂತರ ಸ್ವಲ್ಪ ಹೊತ್ತಿನಲ್ಲೇ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ಬಿಡುಗಡೆಗೆ ಕ್ಷಣ ಗಣನೆ ಎಂದು ಮತ್ತೊಂದು ಪೋಸ್ಟ್ ಹಾಕಿದ್ದ. ಇದನ್ನು ಗಮನಿಸಿದ್ದ ಜೆಡಿಎಸ್, ಪೋಸ್ಟ್ ಅನ್ನು ಸ್ಕ್ರೀನ್ ಶಾಟ್ ತೆಗೆದು ಪೊಲೀಸರಿಗೆ ದೂರು ನೀಡಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆಯೇ ನವೀನ್ ಗೌಡ ಫೇಸ್ ಬುಕ್ ಅಕೌಂಟ್ ಡಿಲೀಟ್ ಮಾಡಿದ್ದ ಎಂದು ಆರೋಪಿಸಲಾಗಿದೆ. ಈ ಸಂಬಂಧ ಎಸ್ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ನವೀನ ಗೌಡ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ.
ನಿಮ್ಮ ಕಾಮೆಂಟ್ ಬರೆಯಿರಿ