ಬೆಂಗಳೂರು: “ವಿಧಾನ ಪರಿಷತ್ ಚುನಾವಣೆ ಟಿಕೆಟ್‌ಗಾಗಿ ಕಾಂಗ್ರೆಸ್ಸಿನಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಹೀಗಾಗಿ ಹಂಚಿಕೆ ಟಿಕೆಟ್ ಹಂಚಿಕೆ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನಿಸುತ್ತದೆ” ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹೇಳಿದ್ದಾರೆ.
ಟಿಕೆಟ್ ಹಂಚಿಕೆ ಸಂಬಂಧ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಶಿವಕುಮಾರ ಅವರು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದರು.
“ಪರಿಷತ್ತಿನ 7 ಸ್ಥಾನಗಳಿಗೆ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಕರಾವಳಿ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಹಳೇ ಮೈಸೂರು ಭಾಗ ಸೇರಿದಂತೆ ಎಲ್ಲಾ ಕಡೆಯಿಂದ ಅವಕಾಶ ನೀಡಬೇಕು ಎಂಬ ಬೇಡಿಕೆ ಇದೆ. ಕೆಲವು ಸ್ಥಾನಗಳಲ್ಲಿ ಹಾಲಿ ಸದಸ್ಯರು ಇದ್ದಾರೆ. ಆಕಾಂಕ್ಷಿಗಳಲ್ಲಿ ಬ್ಲಾಕ್, ಜಿಲ್ಲಾ, ರಾಜ್ಯಮಟ್ಟದಲ್ಲಿ ಪಕ್ಷಕ್ಕೆ ದುಡಿದವರು ಇದ್ದಾರೆ. ಹೀಗಾಗಿ ಈ ಬಾರಿ ಕಷ್ಟಕರ ಪರಿಸ್ಥಿತಿ ಎದುರಾಗಿದೆ. ಈ ಬಾರಿ ಎಲ್ಲಾ ವರ್ಗದವರಿಗೆ ಅವಕಾಶ ಕಲ್ಪಿಸುವುದು ಕಷ್ಟಸಾಧ್ಯ. ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂಬುದು ಮುಖ್ಯ ಎಂದು ಅವರು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ