ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣ : ಎಸ್‌ಐಟಿಯಿಂದ ಇಬ್ಬರ ಬಂಧನ

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ಲೀಲ ವೀಡಿಯೊ ಹರಿಬಿಟ್ಟವರನ್ನು ಎಸ್​ಐಟಿ ಬಂಧಿಸಿದೆ ಎಂದು ವರದಿಯಾಗಿದೆ.
ಆರೋಪಿಗಳಾದ ನವೀನ ಗೌಡ, ಚೇತನ ಎಂಬವರನ್ನು ಎಸ್‌ಐಟಿ ಬಂಧಿಸಿದೆ ಎಂದು ವರದಿಯಾಗಿದೆ. ವೀಡಿಯೊ ವೈರಲ್​ ಮಾಡಿದ್ದವರನ್ನು ಬಂಧಿಸದಕ್ಕೆ ಎಚ್​ಡಿ ಕುಮಾರಸ್ವಾಮಿ ಅವರು ಸಾಕಷ್ಟು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ದೂರು ದಾಖಲಾದ ಒಂದು ತಿಂಗಳು ಬಳಿಕ ಇಬ್ಬರು ಆರೋಪಿಗಳ ಬಂಧನವಾಗಿದೆ.
ಪ್ರಜ್ವಲ್ ಅಶ್ಲೀಲ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ಆರೋಪಿ ನವೀನ್ ಗೌಡ ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿದ್ದ. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಪ್ರಜ್ವಲ್ ರೇವಣ್ಣ ವೀಡಿಯೋ ನೋಡಲು ಈ ವಾಟ್ಸಾಪ್ ಚಾನಲ್ ಫಾಲೋ ಮಾಡಿ ಎಂದು ಫೇಸ್​ಬುಕ್​ನಲ್ಲಿಚಪೋಸ್ಟ್ ಮಾಡಿದ್ದ. ನಂತರ ಸ್ವಲ್ಪ ಹೊತ್ತಿನಲ್ಲೇ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ಬಿಡುಗಡೆಗೆ ಕ್ಷಣ ಗಣನೆ ಎಂದು ಮತ್ತೊಂದು ಪೋಸ್ಟ್ ಹಾಕಿದ್ದ. ಇದನ್ನು ಗಮನಿಸಿದ್ದ ಜೆಡಿಎಸ್, ಪೋಸ್ಟ್ ಅನ್ನು ಸ್ಕ್ರೀನ್ ಶಾಟ್ ತೆಗೆದು ಪೊಲೀಸರಿಗೆ ದೂರು ನೀಡಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆಯೇ ನವೀನ್​ ಗೌಡ ಫೇಸ್ ಬುಕ್ ಅಕೌಂಟ್ ಡಿಲೀಟ್ ಮಾಡಿದ್ದ ಎಂದು ಆರೋಪಿಸಲಾಗಿದೆ. ಈ ಸಂಬಂಧ ಎಸ್​ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ನವೀನ​ ಗೌಡ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement